ಮಂಗಳೂರು, ಆಗಸ್ಟ್.14: ಬಿಲ್ಲವಾಸ್ ದುಬೈ ಮತ್ತು ನಾರ್ದನ್ ಎಮಿರೇಟ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ರವಿವಾರ ನಡೆಯಿತು.
ಸಮಾರಂಭವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಂ ಅವರು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜಯ ಸಿ. ಸುವರ್ಣ, ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದಕುಮಾರ್, ಜಿ.ಬಿ ಬಿಲ್ಡರ್ಸ್ ಮಾಲಕ ಗಣೇಶ್ ಬಂಗೇರಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಈ ಬಾರಿ ಮೆಡಿಕಲ್, ಇಂಜಿನಿಯರಿಂಗ್, ನರ್ಸಿಂಗ್, ತಾಂತ್ರಿಕ, ಡಿಗ್ರಿ ಮತ್ತು ಪಿಯು ತರಗತಿಗಳ ಒಟ್ಟು 210 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 22 ಮಂದಿಗೆ ಪ್ರತಿಭಾ ಪುರಸ್ಕಾರ ಮತ್ತು 15 ಮಂದಿಗೆ ಆರೋಗ್ಯ ಸಹಾಯಧನ ಸೇರಿದಂತೆ ಒಟ್ಟು 15.68 ಲಕ್ಷ ರೂ.ಗಳನ್ನು ವಿತರಿಸಲಾಯಿತು.
ಬಿಲ್ಲವಾಸ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ನ ಮಾಜಿ ಅಧ್ಯಕ್ಷ ಜಿತೇಂದ್ರ ಸುವರ್ಣ, ಕಾರ್ಯದರ್ಶಿ ವಸಂತ್ ತುಂಬೆ, ಕಾರ್ಯಕಾರಿ ಸಮಿತಿಯ ಸದಸ್ಯ ಸುಧಾಕರ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
Comments are closed.