ನವದೆಹಲಿ: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆಯಲಿದ್ದಾರೆ.
ಸರ್ಕಾರದ ನಿಯಮದಂತೆ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವವರಿಗೆ ಖೇಲ್ ರತ್ನ ಪ್ರಶಸ್ತಿ ತಾನಾಗಿಯೇ ಒಲಿದು ಬರಲಿದೆ. ಸಾಕ್ಷಿ ಮಲಿಕ್ ಅವರು ಇದುವರೆಗೂ ಅರ್ಜುನ್ ಪ್ರಶಸ್ತಿ ಪಡೆದಿಲ್ಲ. ಆದರೆ ಸರ್ಕಾರದ ನಿಯಮದಂತೆ ಈಗ ಖೇಲ್ ರತ್ನ ಪ್ರಶಸ್ತಿಗೆ ಅವರನ್ನು ನೇರವಾಗಿ ಪರಿಗಣಿಸಲಾಗುತ್ತದೆ.
ಈಗಾಗಲೇ ರಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತದ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ಹಾಗೂ ಶೂಟರ್ ಜೀತು ರಾಯ್ ಹೆಸರನ್ನು ಪ್ರತಿಷ್ಠಿತ ರಾಜೀವ್ಗಾಂಧಿ ಖೇಲ್ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ಕಂಚು ಗೆದ್ದ ಸಾಕ್ಷಿಗೆ ಹರಿಯಾಣ ಸರ್ಕಾರದಿಂದ ಸರ್ಕಾರಿ ನೌಕರಿ, ರು.2.5 ಕೋಟಿ ಬಹುಮಾನ ಘೋಷಣೆ
ನವದೆಹಲಿ: ರಿಯೋ ಒಲಿಂಪಿಕ್ಸ್ 2016ರಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ಬಹುಮಾನವಾಗಿ ರು.2.5 ಕೋಟಿ ನಗದು ಹಾಗೂ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಹರಿಯಾಣ ಸರ್ಕಾರ ಗುರುವಾರ ಘೋಷಣೆ ಮಾಡಿದೆ.
ಈ ಕುರಿತಂತೆ ಮಾತನಾಡಿರುವ ಹರಿಯಾಣ ಹಣಕಾಸು ಸಚಿವ ಕ್ಯಾಪ್ಟೆನ್ ಅಭಿಮನ್ಯು ಸಿಂಗ್ ಅವರು, ರಕ್ಷಾಬಂಧನ ದಿನದಂದು ಸಾಕ್ಷಿ ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಗೆಲ್ಲುವ ಮೂಲಕ ದೇಶಕ್ಕೆ ಅಷ್ಟೆ ಅಲ್ಲದೆ ಹರಿಯಾಣ ರಾಜ್ಯಕ್ಕೂ ಹೆಮ್ಮೆಯ ಗರಿಯನ್ನು ತಂದುಕೊಟ್ಟಿದ್ದಾರೆ. ಸಾಕ್ಷಿ ಮಲಿಕ್ ಗೆ ಬಹುಮಾನವಾಗಿ ಹರಿಯಾಣ ಸರ್ಕಾರ ರು.2.5 ಕೋಟಿ ನಗದು ಬಹುಮಾನ ಹಾಗೂ 2015ರ ಕ್ರೀಡಾ ನೀತಿಯನ್ವಯ ಸರ್ಕಾರಿ ಉದ್ಯೋಗವನ್ನು ನೀಡಲಿದೆ ಎಂದು ಹೇಳಿದ್ದಾರೆ.
Comments are closed.