ರಾಷ್ಟ್ರೀಯ

ಸದನಗಳಲ್ಲಿ ನೋಟಿನ ಗದ್ದಲ; ಪ್ರಧಾನಿ ಪ್ರತಿಕ್ರಿಯೆಗೆ ಪಟ್ಟು

Pinterest LinkedIn Tumblr

rajya-fiನವದೆಹಲಿ: ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕುರಿತು ಪ್ರಧಾನಿ ಪ್ರತಿಕ್ರಿಯೆ ನೀಡಬೇಕು ಎಂದು ಪಟ್ಟುಹಿಡಿದಿರುವ ವಿರೋಧ ಪಕ್ಷಗಳು ಗುರುವಾರವೂ ಸಂಸತ್‌ನ ಉಭಯ ಸದನಗಳಲ್ಲಿ ನೋಟಿನ ಗದ್ದಲ ಎಬ್ಬಿಸಿವೆ. ರಾಜ್ಯಸಭೆಯಲ್ಲಿ ಎಐಎಡಿಎಂಕೆ ಸದಸ್ಯರು, ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದ್ದು, ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.

₹500, 1000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕುರಿತು ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿರುವ ವಿರೋಧ ಪಕ್ಷ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಸದಸ್ಯರು ಸದನದ ಕಲಾಪದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿರಬೇಕು ಎಂದು ಪಟ್ಟುಹಿಡಿದು ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ಎಐಎಡಿಎಂಕೆ ಸದಸ್ಯರು ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂದು ಒತ್ತಾಯಿಸಿ ಘೋಷಣೆ ಕೂಗಿದರು.
ವಿರೋಧ ಪಕ್ಷದ ಸದಸ್ಯರು ಪದೇ ಪದೇ ಕಲಾಪಕ್ಕೆ ಅಡ್ಡಿಪಡಿಸಿ ಘೊಷಣೆ ಕೂಗಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಮೂರು ಬಾರಿ ಮುಂದೂಡಲಾಯಿತು.

ಲೋಕಸಭೆಯಲ್ಲಿಯೂ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿ ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದ್ದರಿಂದ ಮಧ್ಯಾಹ್ನಕ್ಕೆ ಮುಂದೂಡಲಾಯಿತು.

Comments are closed.