ರಾಷ್ಟ್ರೀಯ

ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: 1 ಯೋಧ ಹುತಾತ್ಮ, ಮೂವರಿಗೆ ಗಾಯ

Pinterest LinkedIn Tumblr

indian-army

ನವದೆಹಲಿ: ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮವನ್ನು ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿ ಮೂವರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್ಎಫ್ ಮುಖ್ಯ ಪೇದೆ ರಾಯ್ ಸಿಂಗ್ ಎಂಬುವವರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.

ಕಳೆದ ರಾತ್ರಿಯಿಂದಲೂ ಪಾಕಿಸ್ತಾನ ಸೈನಿಕರು ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದ್ದು, ಗುಂಡಿನ ದಾಳಿಗೆ ಮೂವರು ಯೋಧರಿಗೆ ಗಂಭೀರವಾಗಿ ಗಾಯವಾಗಿರುವುದಾಗಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ಹೇಳಿದ್ದಾರೆ.

ಕಳೆದ ರಾತ್ರಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ನಡೆಸುತ್ತಿದ್ದ ವೇಳೆ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗಿದ್ದು, ಓರ್ವ ಬಿಎಸ್ಎಫ್ ಯೋಧ ಹಾಗೂ ಮಹಿಳೆಯೊಬ್ಬರಿಗೆ ಗಾಯವಾಗಿತ್ತು. ಭಾರತೀಯ ಸೇನಾ ಕೇಂದ್ರಗಳನ್ನು ಗುರಿಯಾಗಿಸಿಟ್ಟುಕೊಂಡು ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಗೆ ನೌಶಿರಾ ಮತ್ತು ರಜೌರಿ ಸೆಕ್ಟರ್ ನಲ್ಲಿರುವ ಸುಂದರ್ ಬನಿ ಪ್ರದೇಶದಲ್ಲಿದ್ದ ಎರಡು ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಶನಿವಾರ ಕೂಡ ಪಾಕಿಸ್ತಾನ ಸೇನೆ ನೌಶಿರಾ ಸೆಕ್ಟರ್ ಬಳಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿತ್ತು. ಸೆಪ್ಟೆಂಬರ್ 29 ರಂದು ಭಾರತೀಯ ಸೇನೆ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಸೇನೆ ಈ ವರೆಗೂ ಗಡಿ ನಿಯಂತ್ರಣ ರೇಖೆ ಬಳಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ 286 ಬಾರಿ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದೆ. ದಾಳಿ ಪರಿಣಾಮ 14 ಭದ್ರತಾ ಸಿಬ್ಬಂದಿಗಳು ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ.

Comments are closed.