ಮಂಗಳೂರು : ನಗರದ ಕದ್ರಿ ಪಾರ್ಕ್‌ನಲ್ಲಿ ಐದು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ರಾಜೀವ್ ಗಾಂಧಿ ಸಂಗೀತ ಕಾರಂಜಿಯು ಸೋಮವಾರ ಸಂಜೆಯಿಂದ ಪ್ರಾಯೋಗಿಕ ಕಾರ್ಯಾಚರಣೆ ಆರಂಭಿಸಿದೆ. ಪ್ರತಿದಿನ ಸಂಜೆ 6.30 ರಿಂದ 7.30ರವರೆಗೆ ಈ ಸಂಗೀತ ಕಾರಂಜಿ ಕಾರ್ಯನಿರ್ವಹಿಸಲಿದೆ.
ಉದ್ಘಾಟನೆಯನ್ನು ಡಿಸೆಂಬರ್ ಅಂತ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ನೆರವೇರಿಸುವ ನಿರೀಕ್ಷೆ ಇದ್ದು, ಬಳಿಕ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗುವುದು ಎಂದು ಸಂಬಂಧ ಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.