ಕರ್ನಾಟಕ

ಮಹದಾಯಿ ಹೋರಾಟಗಾರರಿಗೆ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದೇನು ಗೊತ್ತಾ…?

Pinterest LinkedIn Tumblr


ಬೆಂಗಳೂರು: ಬಿಜೆಪಿ ಕಚೇರಿಯ ಎದುರು ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.

ಮಹದಾಯಿ ಹೋರಾಟಗಾರರ ಮುಂದಾಳತ್ವ ವಹಿಸಿದ್ದ ವೀರೇಶ್ ಸೊಬರದಮಠ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಹೆಚ್.ಡಿ.ದೇವೇಗೌಡ ಅವರು ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.

‘ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟದ ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ಮಾತನಾಡುವುದಾಗಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ’ ಎಂದು ವೀರೇಶ್ ಸೊಬರದಮಠ ಅವರು ತಿಳಿಸಿದ್ದಾರೆ. ಇದರಿಂದಾಗಿ ಈ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

Comments are closed.