ಮಂಗಳೂರು, ಡಿಸೆಂಬರ್.25: ಅಟಲ್ ಬಿಹಾರಿ ವಾಜಪೆಯಿ ಜನ್ಮ ದಿನಾಚರಣೆಯನ್ನು ಬಿಜೆಪಿ ಮಂಗಳೂರು ನಗರ ದಕ್ಷಿಣ ವಿಭಾಗದ ವತಿಯಿಂದ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.
ಬಿಜೆಪಿ ಮಂಗಳೂರು ನಗರ ದಕ್ಷಿಣ ವಿಭಾಗದ ವತಿಯಿಂದ ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಐದು ವೀಲ್ಚೇರ್, ಲೇಡಿಗೋಶನ್ ಆಸ್ಪತ್ರೆಗೆ ಶುದ್ಧ ನೀರಿನ ಘಟಕ, ಮತ್ತು ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅಟಲ್ ಬಿಹಾರಿ ವಾಜಪೆಯಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸದ ನಳಿನ್ ಕುಮಾರ್ ಅವರು ವೀಲ್ಚೇರ್ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಅವರು, ಕಿಡ್ನಿ, ಹೃದಯ, ಕ್ಯಾನ್ಸರ್ ರೋಗಿಗಳಿಗೆ ಪರಿಹಾರ ನಿಧಿಯನ್ನು ಹೆಚ್ಚು ಮಾಡಿ ಆರ್ಥಿಕವಾಗಿ ಹಿಂದುಳಿದವರಿಗೆ ಆರೋಗ್ಯದಾನ, ಶೈಕ್ಷಣಿಕವಾಗಿ ಸರ್ವಶಿಕ್ಷಣ ಅಭಿಯಾನ, ಅನ್ನಪೂರ್ಣ ಮೊದಲಾದ ಯೋಜನೆ ಜಾರಿಗೆ ತಂದಿದ್ದರು ಎಂದರು.
ಕೊಡುಗೆ ನೀಡಿದ ಬಿಜೆಪಿ ಮಂಗಳೂರು ನಗರ ದಕ್ಷಿಣ ವಿಭಾಗದ ಅಧ್ಯಕ್ಷ ಡಿ.ವೇದವ್ಯಾಸ ಕಾಮತ್ ಮಾತನಾಡಿ, ಅಟಲ್ ಬಿಹಾರಿ ವಾಜಪೆಯಿಯವರ ಜನ್ಮದಿನಾಚರಣೆಯನ್ನು ಬಡವರಿಗೆ, ರೋಗಿಗಳಿಗೆ ಸಹಾಯ ಮಾಡುವ ಮೂಲಕ ಆಚರಿಸುತ್ತಿದೆ. ಆಸ್ಪತ್ರೆಗಳಿಗೆ ವೀಲ್ಚೇರ್, ಶುದ್ಧ ಕುಡಿಯುವ ನೀರಿನ ಘಟಕ ನೀಡುವ ಜತೆಗೆ ರೋಗಿಗಳಿಗೆ ಹಣ್ಣುಹಂಪು ವಿತರಣೆ, ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಗುವುದು ಎಂದರು.
ಮಾಜಿ ಉಪಸಭಾಪತಿ ಯೋಗೀಶ್ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರು, ಮನಪಾ ಸದಸ್ಯರಾದ ದಿವಾಕರ್, ರೂಪಾ ಡಿ.ಬಂಗೇರ, ರಾಜೇಂದ್ರ ಕುಮಾರ್, ಸುಧೀರ್ ಕಣ್ಣೂರ್, ಪಕ್ಷದ ಮುಖಂಡರಾದ ನಿತಿನ್ ಕುಮಾರ್, ಬ್ರಿಜೇಶ್ ಚೌಟ, ಸಂಜಯ್ ಪ್ರಭು, ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Comments are closed.