ಕರ್ನಾಟಕ

ನನ್ನಿಂದಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು: ಕುಮಾರಸ್ವಾಮಿ

Pinterest LinkedIn Tumblr


ಬಾಗಲಕೋಟೆ/ಬಾದಾಮಿ: ನನ್ನ ಹೋರಾಟದ ಫಲವಾಗಿ ಸಿದ್ದರಾಮಯ್ಯ ಈ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ, ಜೆಡಿಎಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಮಾಡಲಾಗಿತ್ತು. ಸಿಎಂ ಹುದ್ದೆ ಸಿಗಲಿಲ್ಲ ಎಂದು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದರು. ಈಗ ದೇವೇಗೌಡ ಮತ್ತು ನನ್ನನ್ನು ಬಾಯಿಗೆ ಬಂದಂತೆ ತೆಗಳುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಶನಿವಾರ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಸಿದ್ದರಾಮಯ್ಯ ನಮ್ಮ ಅಪ್ಪನನ್ನು ಯಾವಾಗ ಇಟ್ಟುಕೊಂಡಿದ್ದರೊ ಗೊತ್ತಿಲ್ಲ. ಮಾತಿಗೊಮ್ಮೆ ಅಪ್ಪನಾಣೆಗೂ ಜೆಡಿಎಸ್‌ ಅಧಿಕಾರಕ್ಕೆ ಬರಲ್ಲ ಎನ್ನುತ್ತಿದ್ದಾರೆ. ಜೆಡಿಎಸ್‌-ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಹೇಳುತ್ತಿದ್ದಾರೆ. ಮುಂದಿನ ಸಿಎಂ ನಾನೇ ಎಂದೂ ಹೇಳಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಅಪ್ಪನ ಮೇಲೆ ಆಣೆ ಮಾಡಿ, ಮುಂದೆ ನಾನೇ ಸಿಎಂ ಆಗುತ್ತೇನೆ ಎಂದು ಹೇಳಲಿ ಎಂದು ಸವಾಲು ಹಾಕಿದರು.

“ಸಿ’ ವೋಟರ್ನ ಮಾಲೀಕ ಸಿದ್ದರಾಮಯ್ಯ ಅವರ ಆಪ್ತ. ದುಡ್ಡು ಕೊಟ್ಟು ಕಾಂಗ್ರೆಸ್‌ ಪರ ಸಮೀಕ್ಷೆ ಮಾಡಿಸಲಾಗಿದೆ. ಮುಂದಿನ ಚುನಾವಣೆಯಲ್ಲಿ ಯಾವುದೇ ರಾಷ್ಟ್ರೀಯ ಪಕ್ಷಗಳೊಂದಿಗೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸಣ್ಣ ಪುಟ್ಟ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಚಿಂತನೆ ನಡೆದಿದೆ.
– ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ

-ಉದಯವಾಣಿ

Comments are closed.