ಹೊಸದಿಲ್ಲಿ: ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಕಡಿತಗೊಳಿಸಿದ್ದಾರೆ.
ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಎರಡು ರೂಪಾಯಿ ಕಡಿತಗೊಳಿಸಿದೆ.
ಇದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತುಸು ಕಡಿಮೆಯಾಗುವ ಸಾಧ್ಯತೆ ಇದೆ.
ರಸ್ತೆ ಸೆಸ್ ಅನ್ನು 8 ರೂಪಾಯಿಗೆ ಏರಿಸಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ವ್ಯತ್ಯಯ ಉಂಟಾಗುವುದಿಲ್ಲ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Comments are closed.