ಕರ್ನಾಟಕ

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು ಏನು ಗೊತ್ತೇ…?

Pinterest LinkedIn Tumblr

ಬೆಂಗಳೂರು: ಬೆಂಗಳೂರು ರ್ಯಾಲಿ ವೇಳೆ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ತಮ್ಮ ಟ್ವೀಟ್ ವಾರ್ ಮುಂದುವರೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಮುಂಬುರುವ ಕರ್ನಾಟಕ ವಿಧಾನಸಭೆ ಚುನವಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಕಳಂಕ ರಹಿತ ಅಭ್ಯರ್ಥಿಗಳಿದ್ದರೆ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿ ಎಂದು ಸವಾಲೆಸೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿ ಭಾಷಣ ಮಾಡಿ ಹೋದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಟ್ವಿಟರ್​ ಕೆಸರೆರಚಾಟ ಮುಂದುವರೆದಿದ್ದು, ಇಂದೂ ಕೂಡ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್ ನಲ್ಲಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಹಲವು ಸವಾಲುಗಳನ್ನು ಎಸೆದಿದ್ದಾರೆ. ಈ ಪೈಕಿ ಪ್ರಮುಖವಾಗಿ ಮುಂಬರುವ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಳಂಕ ರಹಿತ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡುವಂತೆ ಸವಾಲೆಸೆದಿದ್ದಾರೆ.

“ಭ್ರಷ್ಟಾಚಾರದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತು ಆರಂಭಿಸಿರುವುದು ನನಗೆ ಸಂತಸ ತಂದಿದೆ. ಈ ಕುರಿತು ಚಚಿರ್ಸಲು ಅವರನ್ನು ಆಹ್ವಾನಿಸುತ್ತೇನೆ. ನಿಮ್ಮ ಹೇಳಿಕೆ ಅನ್ವಯ
1. ಮೊದಲು ಲೋಕ್​ ಪಾಲ್ ನೇಮಿಸಿ
2. ನ್ಯಾಯಧೀಶ ಲೋಯಾ ಸಾವಿನ ಪ್ರಕರಣ ಸಂಬಂಧ ಕೂಡಲೇ ತನಿಖೆ ನಡೆಸಿ
3. ಅಮಿತ್ ಷಾ ಮಗ ಜಾಯ್​ ಷಾ ಕಂಪನಿಯ ವಿರುದ್ಧದ ಅಕ್ರಮ ಆರೋಪ ತನಿಖೆ ಆರಂಭಿಸಿ
4. ಕ್ರಿಮಿನಲ್ ಹಿನ್ನೆಲೆ ಇಲ್ಲದ ವ್ಯಕ್ತಿಯನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಿ ಎಂದು ಸಿದ್ದರಾಮಯ್ಯು ಪ್ರಧಾನಿಗೆ ಸವಾಲೆಸೆದಿದ್ದಾರೆ.
ಈ ಮೊದಲು ಸಿದ್ದರಾಮಯ್ಯ ಮಾಡಿದ್ದ ಟ್ವೀಟ್​ಗೆ ಬಿಎಸ್ ವೈ ಮತ್ತು ಸಿ.ಟಿ.ರವಿ ಟ್ವೀಟ್​ ಮೂಲಕವೇ ತಿರುಗೇಟು ನೀಡಿದ್ದರು.

ಇದಕ್ಕೂ ಮೊದಲು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ಸಾಧನೆಗಳನ್ನು ಮತ್ತು ಬಿಜೆಪಿ ಸರ್ಕಾರಗಳಲ್ಲಿನ ನ್ಯೂನ್ಯತೆಗಳನ್ನು ಬೊಟ್ಟು ಮಾಡಿ ತೋರಿಸಿದ್ದರು.

Comments are closed.