ರಾಷ್ಟ್ರೀಯ

ಬಿಜೆಪಿ ಯುವ ಮೋರ್ಚಾ ನಾಯಕನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Pinterest LinkedIn Tumblr

ಪಾಟ್ನಾ: ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕನನ್ನು ಶನಿವಾರ ತಡರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದು, ರಾಜ್ಯದಲ್ಲಿ ಒಂದು ವಾರದಲ್ಲಿ ಇಬ್ಬರು ಬಿಜೆಪಿ ನಾಯಕರ ಹತ್ಯೆಯಾಗಿದೆ.

ನಿನ್ನೆ ರಾತ್ರಿ ಲಜಿ ಸಿಲಾಫರಿ ಬಜಾರ್ ನಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ವಿಕ್ಕಿ ಸಾಹು(28) ಮೇಲೆ ಅಪರಿಚಿತ ವ್ಯಕ್ತಿಗಳು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಸಾಹು ತಲೆ ಮತ್ತು ಎದೆಗೆ ಗುಂಡು ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೋಲೆರೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಾಹು ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಕ್ಕಿ ಸಾಹು ಜಾರ್ಖಂಡ್ ಆಡಳಿತರೂಢ ಬಿಜೆಪಿಯ ಗುಮ್ಲಾ ಘಟಕದ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ಸಾಹು ಹತ್ಯೆ ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ರಾಂಚಿ-ಗುಮ್ಲಾ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಕಳೆದ ಮಾರ್ಚ್ 11ರಂದು ಲೋಹರ್ದಾಗ್ ಜಿಲ್ಲಾ ಬಿಜೆಪಿ ಘಟಕದ ಖಜಾಂಜಿಯಾಗಿದ್ದ ಪಂಜಕ್ ಗುಪ್ತಾ ಅವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

Comments are closed.