ರಾಷ್ಟ್ರೀಯ

ಮುಂದಿನ ವರ್ಷ ಐತಿಹಾಸಿಕ ಕೆಂಪುಕೋಟೆಯಲ್ಲಿ ರಾಹುಲ್ ಗಾಂಧಿ ಧ್ವಜಾರೋಹಣ ಮಾಡಲಿದ್ದಾರೆ: ಸಿಧು

Pinterest LinkedIn Tumblr

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದಿನ ವರ್ಷ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಭಾನುವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ನಡೆಯುತ್ತಿರುವ 84ನೇ ಕಾಂಗ್ರೆಸ್ ಮಹಾ ಅಧಿವೇಶನ ಉದ್ದೇಶಿಸಿ ಮಾತನಾಡಿದ ಪಂಜಾಬ್ ಸಚಿವ ಸಿಧು, ರಾಹುಲ್ ನೀವು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಒಗ್ಗೂಡಿಸಿ. ಏಕೆಂದರೆ ಮುಂದಿನ ವರ್ಷ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡುವುದು ನೀವೆೇ ಎಂದರು. ಈ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಅವರೇ ಪ್ರಧಾನಿ ಎಂಬ ಸೂಚನೆ ನೀಡಿದ್ದಾರೆ.

ಇದಕ್ಕು ಮುನ್ನ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು, 2016ರ ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ನೋಟ್ ನಿಷೇಧದ ನಂತರ ವಾಪಸ್ ಬಂದ ನೋಟುಗಳ ಲೆಕ್ಕ ನೀಡುವಲ್ಲಿ ಆರ್ ಬಿಐ ವಿಫಲವಾಗಿದೆ ಎಂದು ದೂರಿದರು.

“ಅಮಾನ್ಯಗೊಂಡ 500, 1000 ರೂ, ಮುಖಬೆಲೆಯ ನೋಟುಗಳನ್ನು ಇದುವರೆಗೂ ಲೆಕ್ಕ ಹಾಕಲು ಆರ್ ಬಿಐ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ತಿರುಪತಿಯ ಹುಂಡಿ ಲೆಕ್ಕ ಹಾಕುವವರು ನಿಮಗಿಂತ ವೇಗವಾಗಿ ಹಣ ಲೆಕ್ಕಿಸುತ್ತಾರೆ. ಈ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರ ಏನು ಮಾಡಿತು” ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

Comments are closed.