ಕರಾವಳಿ

ಕರಾವಳಿಯಲ್ಲಿ ನಾಳೆ ರಾಹುಲ್ ಗಾಂಧಿ ಪ್ರವಾಸ: ಕಾಪು ಕ್ಷೇತ್ರದಲ್ಲಿ ಮಿಂಚಿನ ಸಂಚಾರ!

Pinterest LinkedIn Tumblr

ಉಡುಪಿ: ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ರಾಹುಲ್ ಗಾಂಧಿ ಮಾ. 20 ರಂದು ಕರಾವಳಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರೋ ರಾಹುಲ್ ಬಳಿಕ ಉಡುಪಿ ತೆರಳಲಿದ್ದಾರೆ. ಉಡುಪಿಯಿಂದ ಸಂಜೆ ಮರಳಿ ಮಂಗಳೂರಿಗೆ ಆಗಮಿಸಲಿರೋ ರಾಹುಲ್ ಗಾಂಧಿ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆಂದು ಕಾಪು ಶಾಸಕ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಮಂಗಳೂರು ಹಾಗೂ ಉಡುಪಿಗೆ ಆಗಮಿಸಲಿದ್ದಾರೆ. ಮಂಗಳವಾರ ಬೆಳಗ್ಗೆ 11.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಉಡುಪಿಯ ಕಾಪು ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಧ್ಯಾಹ್ನ ೧೨.೪೫ಕ್ಕೆ ಸೇವಾದಳದ ತರಬೇತಿ ಕೇಂದ್ರ ರಾಜೀವ ಗಾಂಧಿ ಪೊಲಿಟಿಕಲ್ ಇನ್ಸ್ಟಿಟ್ಯೂಟ್ ಉದ್ಘಾಟಿಸಿ ಸೇವಾದಳ ರಾಜ್ಯಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವರು.ಬಳಿಕ ತೆಂಕ ಎರ್ಮಾಳು ಪ್ರದೇಶದಿಂದ ಪಡುಬಿದಿರೆ ಪೇಟೆವರೆಗೂ ರೋಡ್ ಶೋ ನಡೆಸಿ ಪಡುಬಿದ್ರೆ ಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ಮುಖಂಡರಾದ ಕೆ.ಸಿ ವೇಣುಗೋಪಾಲ್, ಡಾ. ಜಿ. ಪರಮೇಶ್ವರ್, ಪಿ.ಸಿ. ವಿಷ್ಣುನಾಥ್, ದಿನೇಶ್ ಗುಂಡುರಾವ್, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫೆರ್ನಾಂಡೀಸ್, ವೀರಪ್ಪ ಮೊಯ್ಲಿ ಮೊದಲಾದವರು ಉಪಸ್ಥಿತರಿರುವರು.

ಎಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡು ಜಿಲ್ಲೆಗೆ ಪ್ರಥಮ ಬಾರಿ ಭೇಟಿ ನೀಡಲಿರೋ ರಾಹುಲ್ ಗಾಂಧಿಯನ್ನು ಸ್ವಾಗತ ಮಾಡಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಮಾಡಲಾಗಿದೆ. ಹೆಲಿಪ್ಯಾಡ್ ಕೂಡ ಸಿದ್ದಗೊಂಡಿದೆ.

Comments are closed.