ಮಂಡ್ಯ: ಸತಃ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿಲ್ಲ. ಎಲ್ಲಿ ಹೋದರೂ ಬರೀ ಸುಳ್ಳು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ನುಡಿದಂತೆ ನಡೆದುಕೊಂಡಿದ್ದಾರೆ. ರೈತರ ಸಾಲಮನ್ನಾ ಮಾಡಿದ್ದಾರೆ. ನಿತಿನ್ ಗಡ್ಕರಿಯೇ ಕಾಂಗ್ರೆಸ್ ಸರ್ಕಾರವನ್ನು ಹೊಗಳಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ6.
ಇಂದು ಮಂಡ್ಯ ಜಿಲ್ಲೆ ಕೆ.ಆರ್ ಪೇಟೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು ರಾಜ್ಯದಲ್ಲಿ ಅನ್ನಭಾಗ್ಯ ಜಾರಿಗೊಳಿಸಿದ್ದೇವೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಎಲ್ಲರನ್ನೂ ಒಗ್ಗೂಡಿ ಮುನ್ನಡೆಯುತ್ತೇವೆ. ಯಾವುದೇ ಜಾತಿ, ಧರ್ಮಕ್ಕಾಗಿ ಮಾತ್ರ ನಮ್ಮ ಸರ್ಕಾರ ಸೀಮಿತವಾಗಿಲ್ಲ ಎಂದರು.
ಮಂಡ್ಯದಲ್ಲಿ ರಾಹುಲ್ ಗಾಂಧಿ ನಡೆಸುತ್ತಿರುವ ಎರಡನೇ ದಿನದ ಯಾತ್ರೆಗೂ ನಟಿ, ಮಂಡ್ಯ ಮಾಜಿ ಸಂಸದೆ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಗೈರು ಆಗಿದ್ದರು.
Comments are closed.