ಕುಂದಾಪುರ: ಕೇಂದ್ರ ಸಂವಹನ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಮನೋಜ್ ಸಿನ್ಹಾ ಅವರು ಭಾನುವಾರ ಸಂಜೆ ಕೊಲ್ಲೂರಿಗೆ ಭೇಟಿ ನೀಡಿ ದೇವಿ ಮೂಕಾಂಬಿಕೆಯ ದರ್ಶನ ಪಡೆದರು.
ಕುಂದಾಪುರ ತಾಲೂಕಿನ ಕೊಲ್ಲೂರಿಗೆ ಇಂದು ಭೇಟಿ ನೀಡಿದ್ದ ಸಚಿವ ಮನೋಜ್ ಸಿನ್ಹಾ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
Comments are closed.