ಬೆಂಗಳೂರು: ಹನೂರು ಕ್ಷೇತ್ರದಲ್ಲಿ ಯಾರಿಗೆ ಕೊಟ್ಟರೂ ಒಪ್ಪಿಕೊಳ್ಳುತ್ತೇನೆ. ಆದರೆ, ಬಿಎಸ್ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ಗೆ ಹೋಗಲ್ಲ. ಗೋವಿಂದರಾಜನಗರ ಕ್ಷೇತ್ರದಿಂದ ಸ್ಪರ್ಧಿಸಲು ನಮ್ಮ ಕ್ಷೇತ್ರದ ಜನ ನನ್ನ ಮನೆಗೆ ಬಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ಚಾಮರಾಜನಗರದ ಹನೂರಿನಿಂದ ಟಿಕೆಟ್ ಕೊಟ್ರೆ ಸ್ಪರ್ಧಿಸುತ್ತೇನೆ. ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ಬಿಎಸ್ವೈ ಮನೆ ಮುಂದೆ ಪರಿಮಳ ನಾಗಪ್ಪ ಕಾಯುತ್ತಿದ್ದಾರೆ. ಹನೂರು ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ರೂ ಒಪ್ಪಿಕೊಳ್ತೇನೆ. ಆದರೆ, ಬಿಎಸ್ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹೇಳಿದರು,
ನನ್ನ ಪುತ್ರ ಅರುಣ್ಗೆ ಅರಸೀಕೆರೆಯಿಂದ ಸ್ಪರ್ಧಿಸಲು ಬಿ.ಎಸ್.ಯಡಿಯೂರಪ್ಪನವರೇ ಸೂಚನೆ ನೀಡಿದ್ದಾರೆ. ಈಗಾಗಲೇ ಅರಸೀಕೆರೆಯಲ್ಲಿ ಕೆಲಸ ಮಾಡ್ತಿದ್ದಾನೆ. ಅಮಿತ್ ಷಾ ಹಾಗೂ ಬಿಎಸ್ ವೈ ಬೇಡ ಅಂದ್ರೆ ಮಗನೂ ಅರಸಿಕೆರೆಯಿಂದ ಸ್ಪರ್ಧಿಸಲ್ಲ ಎಂದು ಪ್ರತಿಕ್ರಿಯಿಸಿದರು.
Comments are closed.