ಕರಾವಳಿ

ಬಿಜೆಪಿ ಚಾರ್ಜ್‌ಶೀಟ್‌ನಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡೆ ಫೋಟೋ : ಪೊಲೀಸ್ ಅಯುಕ್ತರಿಗೆ ದೂರು

Pinterest LinkedIn Tumblr

ಮನಪಾ ಸದಸೈ ಪ್ರತಿಭಾ ಕುಳಾಯಿ

ಮಂಗಳೂರು, ಏಪ್ರಿಲ್. 03: ಭಾರತೀಯ ಜನತಾಪಾರ್ಟಿ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದ ಕಾಂಗ್ರೆಸ್ ವಿರುದ್ಧದ ಚಾರ್ಜ್‌ಶೀಟ್‌ ನಲ್ಲಿ ತನ್ನ ಫೋಟೊ ಹಾಕಿ ವಿನಾ ಕಾರಣ ಮಾನಸಿಕ ಹಿಂಸೆ ನೀಡಿರುವುದಾಗಿ ಕರ್ನಾಟಕ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ಮನಪಾ ಸದಸೈ ಪ್ರತಿಭಾ ಕುಳಾಯಿ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಂಗಳವಾರ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ಪ್ರತಿಭಾ ಕುಳಾಯಿ ಅವರು, ನನಗೆ ಸಂಬಂಧಪಡದ ವಿಷಯದಲ್ಲಿ ನನ್ನ ಫೋಟೊವನ್ನು ಹಾಕಿ ಮಾನಹಾನಿಕಾರಕ ಹೇಳಿಕೆಗಳನ್ನು ಹಾಕುವ ಮೂಲಕ ಬಿಜೆಪಿ ಹಾಗೂ ಅದರ ನಾಯಕರು ಅವಮಾನ ಮಾಡಿದ್ದಾರೆ. ಈ ಬಗ್ಗೆ ಮಾನನಷ್ಟ ಮೊಕದ್ದಮೆಯನ್ನೂ ಹೂಡುವುದಾಗಿ ತಿಳಿಸಿದ್ದಾರೆ.

ಬಿಜೆಪಿಯು ಬಿಡುಗಡೆಗೊಳಿಸಿದ ಚಾರ್ಜ್‌ಶೀಟ್ ಪುಸ್ತಕದಲ್ಲಿ “ಬಿಬಿಎಂಪಿಯಲ್ಲಿ ಮುಖ್ಯಮಂತ್ರಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಾಲಿಕೆ ಸದಸ್ಯೆ ಮಂಜುಳಾ ನಾರಾಯಣ ಸ್ವಾಮಿ ಸೀರೆಯನ್ನು ಎಳೆದಾಡಿದ್ದಂತೂ ಕಾಂಗ್ರೆಸ್ ನೆರಳಲ್ಲಿ ದುರುಳ ಶಕ್ತಿಗಳ ಉಪಟಳ ಎಷ್ಟು ಹೆಚ್ಚಿದೆ ಎಂಬುದಕ್ಕೆ ನಿದರ್ಶನವಾಗಿದೆ. ಹಾಗೆಯೇ ಶಾಸಕ ಮುನಿರತ್ನ ಬೆಂಬಲಿಗರ ಮರ್ಜಿಯಲ್ಲಿರಲು ನಿರಾಕರಿಸಿದ ಬಿಜೆಪಿ ಪಾಲಿಕೆ ಸದಸ್ಯೆ ಮಮತಾ ವಾಸುದೇವ್ ಅವರಿಗೆ ದಿನನಿತ್ಯ ಕಿರುಕುಳ ನೀಡಲಾಗುತ್ತಿದೆ.

ಸುಳ್ಳು ಮೊಕದ್ದಮೆ ಹೂಡಿ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಕುತಂತ್ರ ನಡೆಯುತ್ತಿದೆ. ಮಹಿಳಾ ಸಬಲೀಕರಣದ ಬಗ್ಗೆ ಭಾಷಣ ಬಿಗಿಯುವ ಕಾಂಗ್ರೆಸ್ ಮುಖಂಡರಿಗೆ ತಮ್ಮದೇ ಶಾಸಕ, ಮಹಿಳಾ ಜನಪ್ರತಿನಿಧಿಗಳಿಗೆ ನೀಡುತ್ತಿರುವ ಕಿರುಕುಳ ಕಾಣುವುದಿಲ್ಲ” ಎಂಬ ಹೇಳಿಕೆಯನ್ನು ಪ್ರಕಟಸಲಾಗಿದೆ.

ಈ ಹೇಳಿಕೆಗೆ ನನ್ನ ಫೋಟೊವನ್ನು ಹಾಕಿ ನನಗೆ ಮಾನಸಿಕ ಹಿಂಸೆ ನೀಡಲಾಗಿದೆ ಎಂದು ಪ್ರತಿಭಾ ಕುಳಾಯಿ ಪೊಲೀಸ್ ಆಯುಕ್ತರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನನಗೆ ಸಂಬಂಧಪಡದ ವಿಷಯದಲ್ಲಿ ನನ್ನ ಫೋಟೊ ಹಾಕಿ ನನಗೆ ವಿವಿಧ ಹೇಳಿಕೆಗಳನ್ನು ಪ್ರಕಟಿಸುವ ಮೂಲಕ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಹಾಗೂ ಅದರ ನಾಯಕರು ಅವಮಾನ ಮಾಡಿದ್ದಾರೆ ಎಂದು ಪ್ರತಿಭಾ ಕುಳಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Comments are closed.