ಕರ್ನಾಟಕ

ನಲಪಾಡ್’ಗೆ ಸಿಗದ ಬಿಡುಗಡೆ ಭಾಗ್ಯ; ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

Pinterest LinkedIn Tumblr

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಲೋಗನಾಥನ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಪುತ್ರ ಮೊಹಮದ್ ನಲಪಾಡ್ ಹಾಗೂ ಆತನ ಸಹಚರರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಲಾಗಿದೆ.

ನಲಪಾಡ್ ನ್ಯಾಯಾಂಗ ಬಂಧನ ಅವಧಿ ಮಂಗಳವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಆರೋಪಿಗಳನ್ನು ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್, ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 28ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಇದೇ ವೇಳೆ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಸಹ ಕೋರ್ಟ್ ವಜಾಗೊಳಿಸಿದೆ.

ಫೆಬ್ರವರಿ 17ರಂದು ನಗರದ ಯುಬಿಸಿಟಿಯ ಫರ್ಜಿ ಕಫೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಉದ್ಯಮಿ ಲೋಕನಾಥನ್ ಅವರ ಪುತ್ರ ವಿದ್ವತ್ ಅವರ ಮೇಲೆ ಮೊಹಮದ್ ನಲಪಾಡ್ ಹಾಗೂ ಆತನ ಸಹಚರರು ಮನಬಂದಂತೆ ಹಲ್ಲೆ ನಡೆಸಿದ್ದರು. ಕೆಲ ದಿನಗಳ ಚಿಕಿತ್ಸೆ ಪಡೆದು ವಿದ್ವತ್ ಮಲ್ಯ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪ್ರಕರಣ ನಡೆದ ತಕ್ಷಣ ತಲೆಮರೆಸಿಕೊಂಡಿದ್ದ ಮೊಹಮ್ಮದ್ ನಲಪಾಡ್ ನನ್ನು 36 ಗಂಟೆಗಳ ನಂತರ ಬಂಧಿಸಲಾಗಿತ್ತು.

Comments are closed.