ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಆದಿತ್ಯವಾರ ಶ್ರೀ ಕ್ಷೇತ್ರ ಬ್ರಹ್ಮ ಬೈದರ್ಕಳ ಗರೋಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಶ್ರೀ ದೇವರ ಆಶೀರ್ವಾದ ಪಡೆದುಕೊಂಡರು.
ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಬ್ರಹ್ಮ ಬೈದರ್ಕಳ ಗರೋಡಿಯ ಅಧ್ಯಕ್ಷರಾದ ಚಿತ್ತರಂಜನ್ ಗರೋಡಿ, ಶ್ರೀ ಕ್ಷೇತ್ರದ ಪ್ರಮುಖರಾದ ಸಂದೀಪ್ ಗರೋಡಿ, ಜಗದೀಶ್ ಗರೋಡಿ , ದೇವೋಜಿ ರಾವ್, ಸಂದೀಪ್ ಶೆಟ್ಟಿ, ಅಜಯ್, ರಮೇಶ್ ಕಂಡೇಟು, ಪ್ರಭಾಮಾಲಿನಿ ಮುಂತಾದವರು ಉಪಸ್ಥಿತರಿದ್ದರು.
ಬಳಿಕ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಶ್ರೀ ದೇವರ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಸೂರ್ಯನಾರಾಯಣ ದೇವಸ್ಥಾನದ ಬಾಲಕೃಷ್ಣ ಕೊಟ್ಟಾರಿ , ಗಣೇಶ್ ಶೆಟ್ಟಿ, ಕೆ.ಪಿ ಶೆಟ್ಟಿ, ವಸಂತ ಪೂಜಾರಿ, ವಿಜಯ್ ಕುಮಾರ್, ವಿಠ್ಠಲ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು .
ಆ ಬಳಿಕ ತಮ್ಮ ಬೆಂಬಲಿಗರೊಂದಿಗೆ ಅತ್ತಾವರ ಬಾಬುಗುಡ್ಡೆ ಸಮೀಪದ ನಂದಿಗುಡ್ಡೆಗೆ ತೆರಳಿ ನಂದಿ ಗುಡ್ಡೆಯಲ್ಲಿರುವ ಶ್ರೀನಿವಾಸ ಮಲ್ಯರವರ ಪ್ರತಿಮೆಗೆ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.
ನಾಳೆ (ಸೋಮವಾರ) ಬೃಹತ್ ಪಾದಯಾತ್ರೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಕೆ
ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವೇದವ್ಯಾಸ್ ಕಾಮತ್ ಅವರು ನಾಳೆ ತಾ 23/4/2018ನೇ ಸೋಮವಾರ ಬೆಳಿಗ್ಗೆ 11ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಿಂದ ಬೃಹತ್ ಪಾದಯಾತ್ರೆ ಮೂಲಕ ತಮ್ಮ ಬೆಂಬಲಿಗ ರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವರು.
ಈ ಬೃಹತ್ ಪಾದಯಾತ್ರೆಯಲ್ಲಿ ಮಂಗಳೂರು ಮಹಾನಗರದ ಬಿಜೆಪಿಯ ಎಲ್ಲಾ ನಾಯಕರು, ಮನಪಾ ಸದಸ್ಯರು, ವಿವಿಧ ಮೋರ್ಚಾಗಳ ಪಧಾಧಿಕಾರಿಗಳು, ಕಾರ್ಯಕರ್ತರು, ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು, ಭಾರತೀಯ ಜನತಾ ಪಕ್ಷದ ಹಿತೈಷಿಗಳು ಹಾಗೂ ಮತದಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
Comments are closed.