ಕರ್ನಾಟಕ

ವಿಜಯಕುಮಾರ್‌ ನಿಧನದ ಹಿನ್ನೆಲೆ: ಜಯನಗರ ಚುನಾವಣೆ ಮುಂದೂಡಿಕೆ

Pinterest LinkedIn Tumblr


ಬೆಂಗಳೂರು: ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಎನ್‌. ವಿಜಯಕುಮಾರ್‌ ಅವರ ಹಠಾತ್‌ ನಿಧನದ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ.

ಚುನಾವಣಾ ಆಯೋಗ ಮರು ನಿಗದಿಪಡಿಸುವ ದಿನಾಂಕವನ್ನು ಕಾಯ್ದಿರಿಸಿ, ಮುಂದಿನ ಆದೇಶದರೆಗೆ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಿ ಚುನಾವಣಾಧಿಕಾರಿ ಶುಕ್ರವಾರ (ಮೇ 4) ಆದೇಶ ಹೊರಡಿಸಿದ್ದಾರೆ.

2018ರ ಸಾರ್ವತ್ರಿಕ ಚುನಾವಣೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಬಿ.ಎನ್‌. ವಿಜಯಕುಮಾರ್‌ ಅವರು ಮೇ 4ರಂದು ತಡ ರಾತ್ರಿ 1 ಗಂಟೆಗೆ ನಿಧನರಾಗಿದ್ದಾರೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನೀಡಿರುವ ಮರಣ ಪ್ರಮಾಣ ಪತ್ರದಿಂದ ದೃಢಪಟ್ಟಿದೆ. ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಈ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ನಿಧನರಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆ 1951ರ ಕಲಂ 52ರ ಪ್ರಕಾರ ಚುನಾವಣೆ ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2013ರಲ್ಲೂ ಹೀಗೇ ಆಗಿತ್ತು:
2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಇದೇ ರೀತಿ ಆಗಿತ್ತು. ಆಗ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಣ್ಣಮೊಗೇಗೌಡ ಮತದಾನಕ್ಕೆ ಒಂದು ವಾರ ಇರುವಾಗ ಪ್ರಚಾರದ ವೇಳೆ ಹೃದಯಘಾತದಿಂದ ನಿಧನ ಹೊಂದಿದ್ದರು. ಆದ ಕಾರಣ ನಿಗದಿತ ಅವಧಿಯಲ್ಲಿ ಆ ಕ್ಷೇತ್ರದಲ್ಲಿ ಚುನಾವಣೆ ನಡೆದಿರಲಿಲ್ಲ.

-Udayavani

Comments are closed.