ಕರಾವಳಿ

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ :ಉಡುಪಿ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

Pinterest LinkedIn Tumblr
 ( ಸಾಂದರ್ಭಿಕ ಚಿತ್ರ )

ಬೆಂಗಳೂರು / ಮಂಗಳೂರು / ಮೇ 7: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಮತ್ತು ಯಾದಗಿರಿ ಕೊನೆಯ ಸ್ಥಾನ ಪಡೆದಿದೆ

ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೋಮವಾರ ಪ್ರಕಟಿಸಿದರು.

ಈ ಬಾರಿ 71.93ರಷ್ಟು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಶೇ 4ರಷ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶದಲ್ಲಿ ಉಡುಪಿ ಪ್ರಥಮ ಮತ್ತು ಯಾದಗಿರಿ ಕೊನೆಯ ಸ್ಥಾನ ಪಡೆದಿದೆ .ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.

ನಾಳೆ ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಇಂದು ಪ್ರೌಢಶಿಕ್ಷಣ ಮಂಡಳಿ ವೆಬ್ ಸೈಟ್ ನಲ್ಲಿ ಮಧ್ಯಾಹ್ನ 1ಗಂಟೆಗೆ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಫಲಿತಾಂಶ ನೋಡಲು ಈ ಕೆಳಗಿನ ವೆಬ್ ತಾಣಗಳಿಗೆ ಭೇಟಿ ಕೊಡಿ: : http://karresults.nic.in/ ಮತ್ತು http://kseeb.kar.nic.in/

Comments are closed.