ಬೆಂಗಳೂರು: ನಕಲಿ ಮತದಾರರ ಗುರುತಿನ ಚೀಟಿ ಮಾಡಿಕೊಡುತ್ತಿದ್ದ ತಂಡವನ್ನು ಚುನಾವಣಾ ವಿಚಕ್ಷಣ ದಳ ಪತ್ತೆ ಹಚ್ಚಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು 15 ಸಾವಿರಕ್ಕೂ ಅಧಿಕ ನಕಲಿ ವೋಟರ್ ಐಡಿ ಹಾಗೂ ಅಪಾರ ಪ್ರಮಾಣದಲ್ಲಿ ನಗದು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರು ಎನ್ನಲಾಗಿದ್ದು, ಗೂಂಡಾಗಿರಿ ಮೂಲಕ ಸಾರ್ವಜನಿಕರಿಂದ ಮತದಾರರ ಗುರುತಿನ ಚೀಟಿ ಮಾಡಿಕೊಡುತ್ತಿದ್ದರು. ಅಲ್ಲದೆ ಅಪಾರ ಪ್ರಮಾಣದ ಹಣ ಕೀಳುತ್ತಿದ್ದರು ಎಂದು ತಿಳಿದು ಬಂದಿದೆ.
ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೂಂಡಾಗಿರಿ ಮೂಲಕ ಮತ ಪಡೆಯಲೂ ಹುನ್ನಾರ ನಡೆಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತರು ಕ್ಷಿಪ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ ಎಂದು ತಿಳಿದು ಬಂದಿದೆ.
Comments are closed.