ಕರ್ನಾಟಕ

ಅಧಿಕಾರಕ್ಕೇರಬೇಕು ಎನ್ನುವ ಉದ್ದೇಶದಿಂದ ಬಿಜೆಪಿಯಿಂದ ಸರ್ಕಾರಿ ಸಂಸ್ಥೆಗಳ ದುರ್ಬಳಕೆ: ಸಿಎಂ ಸಿದ್ದರಾಮಯ್ಯ ಆರೋಪ

Pinterest LinkedIn Tumblr

ಬೆಂಗಳೂರು: ಶತಾಯಗತಾಯ ಅಧಿಕಾರಕ್ಕೇರಬೇಕು ಎನ್ನುವ ಉದ್ದೇಶದಿಂದ ಬಿಜೆಪಿ ನಾಯಕರು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಜಾಲಹಳ್ಳಿಯ ಅಪಾರ್ಟ್​ವೆುಂಟ್​ವೊಂದರಲ್ಲಿ ಪತ್ತೆಯಾದ ಸಾವಿರಾರು ನಕಲಿ ಮತದಾರ ಗುರುತಿನ ಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರು ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಪಕ್ಷ ಚುನಾವಣಾ ಗೆಲುವಿಗಾಗಿ ಕಾಂಗ್ರೆಸ್ ಮೇಲೆ ಕಣ್ಗಾವಲಿರಿಸಿದೆ ಎಂದು ಗಂಭೀರ ಆರೋಪ ಮಾಡಿದರು.

ನಾನು 12ನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಆದರೆ ಮೊದಲ ಬಾರಿಗೆ ಚುನಾವಣೆ ಸಂದರ್ಭದಲ್ಲಿ ಐಟಿ ದಾಳಿಗಳಾಗುತ್ತಿವೆ. ಬಿಜೆಪಿ ಕೇಂದ್ರ ಸರ್ಕಾರವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದ್ದು, ಇದರ ಬಗ್ಗೆ ನಾನು ಹೆಚ್ಚಿನದೇನೂ ಹೇಳುವುದಿಲ್ಲ. ಆದರೆ ಇಂತಹ ಗಂಭೀರ ವಿಚಾರಗಳ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಇನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ಜಾಲಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ 9,746 ನಕಲಿ ಮತದಾರ ಗುರುತಿನ ಚೀಟಿಗಳು ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಪರಸ್ಪರ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕೆಸರೆರಚಾಟದಲ್ಲಿ ತೊಡಗಿವೆ.

Comments are closed.