ಕೋಲ್ಕತ್ತಾ: ನಟಿಯೊಬ್ಬರು ಜೀವಂತ ಹಾವನ್ನು ಇಟ್ಟುಕೊಂಡು ಕಾರ್ಯಕ್ರಮ ನೀಡುತ್ತಿದ್ದ ವೇಳೆ ಹಾವು ಕಚ್ಚಿ ಆಕೆ ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
63 ವರ್ಷದ ನಟಿ ಕಾಲಿದಾಸಿ ಮೊಂಡಲ್ ವಿಷಪೂರಿತ ಹಾವನ್ನು ಇರಿಸಿಕೊಂಡು ಕಾರ್ಯಕ್ರಮ ನೀಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಜಾತ್ರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನಟಿ ಹಾವಿನೊಂದಿಗೆ ಕಾರ್ಯಕ್ರಮ ನೀಡುತ್ತಿದ್ದರು.
ಹಾವು ಕಚ್ಚಿದ್ದರಿಂದ ನಟಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲಿಗೆ ಮಂತ್ರ ಹಾಕುವವರ ಬಳಿ ಕರೆದುಕೊಂಡು ಹೋಗಿದ್ದಾರೆ. ಆದರೆ ಅದರಿಂದ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲಿ ವಿಷ ಆಕೆಯ ದೇಹವನ್ನು ಸೇರಿದ್ದರಿಂದ ಆಕೆ ಮೃತಪಟ್ಟಿದ್ದು ಆಕೆ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು.
ಪ್ರತೀ ವರ್ಷವೂ ಈ ನಟಿ ಪ್ಲಾಸ್ಟಿಕ್ ಹಾವಿನೊಂದಿಗೆ ಕಾರ್ಯಕ್ರಮ ನೀಡುತ್ತಿದ್ದಾರೆ. ಆದರೆ ಈ ವರ್ಷ 2 ನಿಜವಾದ ಹಾವುಗಳನ್ನು ಇರಿಸಿಕೊಂಡು ಕಾರ್ಯಕ್ರಮ ನೀಡುತ್ತಿದ್ದರು. ನಟಿ ಸಾವು ಕುರಿತಂತೆ ಯಾವು ಪ್ರಕರಣ ದಾಖಲಿಸಲ್ಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Comments are closed.