ಕರ್ನಾಟಕ

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ವಿಶೇಷ ತನಿಖಾ ದಳದಿಂದ ಮತ್ತೊಬ್ಬ ವಶಕ್ಕೆ

Pinterest LinkedIn Tumblr


ಬೆಂಗಳೂರು: ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಎಸ್‌ಐಟಿ (ವಿಶೇಷ ತನಿಖಾ ದಳ) ವಶಕ್ಕೆ ಪಡೆದಿದೆ.

ವ್ಯಕ್ತಿಯೋರ್ವನನ್ನು ವಾರದ ಹಿಂದೆ ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ, ಈ ವರೆಗೆ ಆತನ ಬಗ್ಗೆ ವಿವರಗಳನ್ನು ಬಹಿರಂಗ ಪಡಿಸಿಲ್ಲ. ಉನ್ನತ ಮೂಲಗಳ ಮಾಹಿತಿ ಪ್ರಕಾರ, ಸಾಹಿತಿ ಎಂ.ಎಂ ಕಲಬುರಗಿ, ನರೇಂದ್ರ ದಾಬೋಲ್ಕರ್ ಅವರ ಹತ್ಯೆಯ ಹಿಂದೆಯೂ ಸದ್ಯ ವಶಕ್ಕೆ ಪಡೆದಿರುವ ವ್ಯಕ್ತಿಯ ಕೈವಾಡವಿರುವ ಬಗ್ಗೆ ಸಂಶಯ ಮೂಡಿದೆ. ಹೈದರಾಬಾದ್‌ ಕರ್ನಾಟಕ ಭಾಗದ ಪ್ರಭಾವಿ ನಾಯಕನ ಹತ್ಯೆಗೆ ಸಂಚು ರೂಪಿಸಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

2017 ಸೆ.5 ರಂದು ಗೌರಿಯನ್ನು ಆಕೆಯ ಮನೆಯ ಗೇಟಿನ ಎದುರು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ 2018 ಮಾ.9 ರಂದು ಎಸ್‌ಐಟಿ ಕೆ.ಟಿ. ನವೀನ್‌ ಕುಮಾರ್‌ ಎಂಬಾತನನ್ನು ಬಂಧಿಸಿತ್ತು.

ಕೊಲೆಗಾರರಿಗೆ ಶಸ್ತ್ರಾಸ್ತ್ರ ಪೂರೈಕೆ ಹಾಗೂ ಕೊಲೆ ಸಂಚು ರೂಪಿಸಿದ ಆರೋಪದಡಿ ಆತನನ್ನು ಬಂಧಿಸಿದ್ದ ಎಸ್‌ಐಟಿ, ಮಂಪರು ಪರೀಕ್ಷೆಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದರೆ ನವೀನ್‌ ಕುಮಾರ್‌ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಇದೀಗ ತಂಡ ಮತ್ತೊಬ್ಬನನ್ನು ಬಂಧಿಸಿ, ವಿಚಾರಣೆಗ ಒಳಪಡಿಸಿದೆ.

Comments are closed.