ರಾಷ್ಟ್ರೀಯ

ಔರಂಗಾಬಾದ್’ನಲ್ಲಿ ನೀರಿಗಾಗಿ ಗುಂಪುಗಳ ನಡುವೆ ಘರ್ಷಣೆ; ಇಬ್ಬರ ಸಾವು-, 100ಕ್ಕೂ ಹೆಚ್ಚು ಅಂಗಡಿಗಳು-ವಾಹನ ಬೆಂಕಿಗಾಹುತಿ

Pinterest LinkedIn Tumblr

ಔರಂಗಾಬಾದ್; ದೇಗುಲದಲ್ಲಿ ಅಕ್ರಮ ನೀರಿನ ಸಂಪರ್ಕವನ್ನು ಕಡಿ ಹಾಕಿದ್ದಾರೆಂದು ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, 100ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಘರ್ಷಣೆಗಿಳಿದಿದ್ದ ಗುಂಪು ಸಿಕ್ಕಸಿಕ್ಕ ಅಂಗಡಿಗಳಿಗೆ ಹಾಗೂ ರಸ್ತೆಯಲ್ಲಿ ನಿಂತಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆಂದು ವರದಿಗಳು ತಿಳಿಸಿವೆ.

ಹಿಂಸಾಚಾರ ಹತ್ತಿಕ್ಕುವ ಸಲುವಾಗಿ ಪೊಲೀಸು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ವೇಳೆ ಸ್ಥಳೀಯ ನಿವಾಸಿ ಅಬ್ದುಲ್ ಖ್ವಾದ್ರಿ ಎಂಬುವವರು ಮೃತಪಟ್ಟಿದ್ದಾರೆ. ಘರ್ಷಣೆ ವೇಳೆ ಉದ್ರಿಕ್ತ ಗುಂಪು ಅಂಗಡಿಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಅಂಗಡಿಯಲ್ಲಿ ಎರಡನೇ ವ್ಯಕ್ತಿ ಜಗನ್ಲಾಲ್ ಬನ್ಸಿಲೆ ಎಂಬುವವರು ಮೃತಪಟ್ಟಿದ್ದಾರೆ.

ಘರ್ಷಣೆ ಹಿಂಸಾಚಾರ ರೂಪ ಪಡೆದುಕೊಂಡ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿರುವ ಸರ್ಕಾರ, ಇದೀಗ ಔರಂಗಾಬಾದ್ ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದೆ ಎಂದು ತಿಳಿದುಬಂದಿದೆ.

ನಿನ್ನೆ ಸಂಜೆ 6-7 ಗಂಟೆ ಸುಮಾರಿಗೆ ಹೋಟೆಲ್ ನಲ್ಲಿದ್ದ ಇಬ್ಬರು ವ್ಯಕ್ತಿಗಳು ಜಗಳಕ್ಕಿಳಿದಿದ್ದಾರೆ. ಬಳಿಕ ತಮ್ಮ ಬೆಂಬಲಿಗರನ್ನು ಸ್ಥಳಕ್ಕೆ ಕರೆದು ಘರ್ಷಣೆಗಿಳಿದಿದ್ದಾರೆಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಘರ್ಷಣೆ ವೇಳೆ ಪೊಲೀಸರು ಸ್ಥಳಕ್ಕಾಗಮಿಸಿದರೂ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಬಳಿಕ ಘರ್ಷಣೆ ಹಿಂಸಾಚಾರಕ್ಕೆ ತಿರುಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ಘರ್ಷಣೆಗೆ ಪ್ರಮುಖ ಕಾರಣಗಳು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿಸಿದ್ದಾರೆ.

Comments are closed.