ಕರಾವಳಿ

ಬಿಜೆಪಿ ಅಭ್ಯರ್ಥಿಗಳ ಭರ್ಜರಿ ಗೆಲುವಿಗೆ ಸಂಭ್ರಮ ಆಚರಿಸಲು ಬಂದ ಕಾರ್ಯಕರ್ತರನ್ನು ನಿರಾಶೆಗೊಳಿಸಿದ ಪೊಲೀಸರು

Pinterest LinkedIn Tumblr

ಮಂಗಳೂರು, ಮೇ.15 : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಏಣಿಕೆ ಕಾರ್ಯ ಮುಗಿದಿದ್ದು, ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದಲ್ಲಿ ಏಳರಲ್ಲಿ ಜಯಭೇರಿ ಭಾರಿಸಿರುವ ಬಿಜೆಪಿ ಅಭ್ಯರ್ಥಿಗಳ ಪರ ಸಂಭ್ರಮ ಆಚರಿಸಲು ನಗರದ ಬೋಂದೇಲ್‌ನ ಮತ ಏಣಿಕೆ ಕೇಂದ್ರದ ಮುಂದೆ ಬಂದ ಕಾರ್ಯಕರ್ತರನ್ನು ಪೊಲೀಸರು ಸ್ಥಳದಿಂದ ತೆರವುಗೊಳಿಸುವ ಮೂಲಕ ನಿರಾಶೆಗೊಳಿಸಿದ್ದಾರೆ.

ಮತ ಎಣಿಕೆ ಪ್ರಕ್ರಿಯೆಯು ಸುಸೂತ್ರವಾಗಿ ನಡೆಸುವ ಸಲುವಾಗಿ ಜಿಲ್ಲಾಡಳಿತವು ಮೇ 14ರ ರಾತ್ರಿ 12 ಗಂಟೆಯಿಂದ 16ರ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸೆ. 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಮತ ಎಣಿಕೆಯ ಕೇಂದ್ರದ ಬಳಿ ಜಮಾಯಿಸಿ ವಿವಿಧ ಪಕ್ಷಗಳ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ಚದುರಿಸಿದರು.

ನಿಷೇಧಾಜ್ಞೆ ಅವಧಿಯಲ್ಲಿ ಮತ ಎಣಿಕೆ ಕೇಂದ್ರ ಸಹಿತ ಎಲ್ಲೂ ಕಾನೂನು ಬಾಹಿರವಾಗಿ ಗುಂಪು ಸೇರುವುದು, ವಿಜಯೋತ್ಸವ ಮಾಡುವುದು, ಮೆರವಣಿಗೆ ನಡೆಸುವುದನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಅಲ್ಲಿದ್ದ ಎಲ್ಲರನ್ನೂ ಪೊಲೀಸರು ಜಾಗ ಖಾಲಿ ಮಾಡಿಸಿದರು. ಅಲ್ಲದೆ, ಹೂವಿನ ಮಾಲೆ ಸಹಿತ ವಿವಿಧ ಸಾಮಗ್ರಿಗಳನ್ನು ಮಾರಾಟಕ್ಕೆ ತಂದ ಮಾರಾಟಗಾರರನ್ನು ಕೂಡ ಪೊಲೀಸರು ತೆರವುಗೊಳಿಸಿದರು.

Comments are closed.