ಕರ್ನಾಟಕ

ಟ್ವೀಟ್ ಮೂಲಕ ದೇವೇಗೌಡರಿಗೆ ಹುಟ್ಟುಹಬ್ಬದ ಶುಭ ಕೋರಿದ ಮೋದಿ

Pinterest LinkedIn Tumblr


ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಅವರಿಗೆ ಪ್ರಧಾನಿ ಮೋದಿ ಅವರು ಶುಕ್ರವಾರ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ” ಮಾಜಿ ಪ್ರಧಾನಿ ದೇವೇಗೌಡರಿಂದಿಗೆ ಮಾತನಾಡಿ, ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ. ಅವರಿಗೆ ಆರೋಗ್ಯ, ಆಯಸ್ಸು ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ,” ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ದೇವೇಗೌಡರಿಗೆ ಶುಭಾಶಯ ಕೋರಿದ್ದರು.

ಇನ್ನೊಂದೆಡೆ, ತಮ್ಮ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ದೇವೇಗೌಡರು ಎಂದಿನಂತೆ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದಿದ್ದಾರೆ.

Comments are closed.