ಕರಾವಳಿ

ಮಂಗಳೂರಿನಲ್ಲಿ ಇಂದು ನಿಷೇಧಾಜ್ಞೆ : ಸೆಕ್ಷನ್ 144 ಜಾರಿ

Pinterest LinkedIn Tumblr

ಮಂಗಳೂರು, ಮೇ 19: ರಾಜ್ಯದಲ್ಲಿ ಶನಿವಾರ ಸಂಜೆ ನಡೆಯಲಿರುವ ಹೊಸ ಸರಕಾರ ವಿಶ್ವಾಸ ಮತ ಯಾಚನೆ ಸಂದರ್ಭ ಮಂಗಳೂರಿನಲ್ಲಿ ಯಾವೂದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಈ ಆದೇಶ ಹೊರಡಿಸಿದ್ದು, ಶನಿವಾರ ಮುಂಜಾನೆ 8 ಗಂಟೆಯಿಂದ ಮೇ 20ರ ಬೆಳಗ್ಗೆ 10 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇಂದು ವಿಧಾನ ಸೌಧದಲದಲಿ ಬಿಜೆಪಿ, ಕಾಂಗ್ರೇಸ್ ಹಾಗೂ ಜೆಡಿಎಸ್ ವಿಶ್ವಾಸ ಮತ ಪರೀಕ್ಷೆಗೆ ಒಳಪಡಲಿವೆ. ಈ ಕುರಿತು ಈಗಾಗಲೇ ರಾಜ್ಯಾದ್ಯಂತ ಪರ ವಿರೋಧ ಚರ್ಚೆ, ಅನಿಸಿಕೆಗಳು ವ್ಯಕ್ತವಾಗುತ್ತಿವೆ. ಈ ವಿರೋಧ ,ಭಿನ್ನಾಭಿಪ್ರಾಯಗಳು ಘರ್ಷಣೆಗೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಈ ಕಾರಣ ಮಂಗಳೂರಿನಲ್ಲಿಯೂ ರಾಜಕೀಯ ಘರ್ಷಣೆ ನಡೆಯುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಅನ್ವಯ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ , ಕೆರಿಗಳಲ್ಲಿ , ಸಾರ್ವಜನಿಕ ಕಟ್ಟಡ ಮತ್ತು ಸರಕಾರಿ ಕಟ್ಟಡ ಕಚೇರಿ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಇಂದು ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ , ರಾಜಕೀಯ ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ. ಪಟಾಕಿ ಸಿಡಿಸುವುದು , ಅಥವಾ ಇನ್ನಿತರ ಸ್ಪೋಟಕ ವಸ್ತುಗಳನ್ನು ಸಿಡಿಸುವುದನ್ನು ಅಥವಾ ಹೊಂದಿರುವುದನ್ನು ಸೆಕ್ಷನ್ 144 ಅನ್ವಯ ನಿಷೇಧಿಸಲಾಗಿದೆ.

Comments are closed.