ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಬಳಿ ಗಾಂಜಾ ಹೊಂದಿದ್ದ ಆರೋಪಿ ಅರೆಸ್ಟ್

Pinterest LinkedIn Tumblr

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಸ್ಥಳದ ಬಳಿ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಉಡುಪಿ ಡಿ.ಸಿ.ಐ.ಬಿ ಇನ್‌ಸ್ಪೆಕ್ಟರ್ ಸಂಪತ್ ಕುಮಾರ್ ಎ ಹಾಗೂ ತಂಡದವರು ಬಂಧಿಸಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿದ್ಯಾರಣ್ಯಪುರದ ಹಾಗೂ ಪ್ರಸ್ತುತ ಶಿವಮೊಗ್ಗ ವಾಸಿ ಫಜಲೂರ್ ರೆಹಮಾನ್ @ ಮುನ್ನಾ(37) ಬಂಧಿತ ಆರೋಪಿ.

ಬಂಧಿತ ಆರೋಪಿಯಿಂದ 35,000 ರೂಪಾಯಿ ಮೌಲ್ಯದ 1 ಕೆ.ಜಿ 140 ಗ್ರಾಂ ತೂಕದ ಗಾಂಜಾ , 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಉಡುಪಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ಬ. ನಿಂಬರ್ಗಿ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಮತ್ತು ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ.ಆರ್ ಜೈಶಂಕರ್ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಡಿ.ಸಿ.ಐ.ಬಿ ಘಟಕದ ಎಎಸ್‌ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ಪ್ರವೀಣ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಇದ್ದರು.

Comments are closed.