ಮಂಗಳೂರು ಜೂನ್ 09 : ಕರಾವಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಪರಿಣಾಮ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಸಮುದ್ರ ಪ್ರಕ್ಷುಬ್ಧಗೊಂಡಿದೆ. ಶನಿವಾರ ಮುಂಜಾನೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಭಾರೀ ಗಾಳಿ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿ ಬಿದ್ದಿದೆ. ಇದೇ ವೇಳೆ ವಿದ್ಯುತ್ ಕಂಬಗಳು ನೆಲಸಮವಾಗಿದ್ದರಿಂದ ಜಿಲ್ಲೆಯ ಹಲವಾರು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯ ಇತರೆಡೆ ಕೂಡ ಉತ್ತಮ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಪ್ರಕಾರ ಇನ್ನೂ 2 ದಿನ ಭಾರೀ ಮಳೆ ಮುಂದುವರೆಯಲಿದೆ.
ಹಲವೆಡೆ ಧರೆಗುರುಳಿದ ಮರಗಳು : ವಿದ್ಯುತ್ ಕಂಬಗಳು ನೆಲಸಮ
ಮಂಗಳೂರಿನಲ್ಲಿ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆ ಶನಿವಾರ ಮುಂಜಾನೆಯಿಂದ ಬಿರುಸುಗೊಂಡಿದ್ದು, ಕರಾವಳಿಯಾದ್ಯಂತಭಾರೀ ಮಳೆ ಸುರಿಯುತ್ತಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು, ಜೆಲ್ಲೆಯ ಹಲವೆಡೆಗಳಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಹಲವಾರು ಮರಗಳು ಧರೆಗುರುಳಿದೆ. ಈ ಸಂದರ್ಭ ಕೆಲವು ಕಡೆಗಳಲ್ಲಿ ವಿದ್ಯುತ್ ಕಂಬಗಳು ನೆಲಸಮವಾಗಿದ್ದರಿಂದ ಜಿಲ್ಲೆಯ ಹಲವಾರು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ವೇಗವಾಗಿ ಜೋರಾದ ಗಾಳಿಯೂ ಬೀಸುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಬಿರುಸಿನ ಮಳೆಯೊಂದಿಗೆ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಜಿಲ್ಲೆಯ ಹಲವೆಡೆ ಮರಗಳು ನೆಲಕ್ಕುರುಳಿವೆ. ಕರಾವಳಿಯ ಜೀವನಾಡಿ ಕೊಂಕಣ ರೈಲ್ವೆ ಮುಂಗಾರು ಮಳೆಗೆ ಸನ್ನದ್ ಜಿಲ್ಲೆಯ ಹಲವು ಭಾಗದಲ್ಲಿ ವಿದ್ಯುತ್ ಕೈಕೊಟ್ಟಿದೆ. ಗಾಳಿಯ ರಭಸದಿಂದಾಗಿ ಸಮುದ್ರ ತೀರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿದ್ದು ಕಡಲು ಭೋರ್ಗರೆಯುತ್ತ ದಡಕ್ಕೆ ಅಪ್ಪಳಿಸುತ್ತಿದೆ.
ಭಾರೀ ಗಾಳಿ ಮಳೆಯಿಂದಾಗಿ ಮಂಗಳೂರಿನ ಸುರತ್ಕಲ್ ಸನೀಪದ ಹೊಸಬೆಟ್ಟು ಎಂಬಲ್ಲಿ ಭಾರೀ ಮರವೊಂದು ಉರುಳಿ ಮನೆಯ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಉಂಟಾಗಿದೆ. ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.ನಗರ ಕೇಂದ್ರ ಮೈದಾನದ ಎದುರು, ಆರ್ಟಿಒ ಕಚೇರಿ ಬಳಿ ಬೃಹತ್ ಮರವೊಂದು ಗಾಳಿಮಳೆಗೆ ಮುರಿದು ರಸ್ತೆಗೆ ಉರುಳಿದೆ. ಇದರಿಂದ ಕೆಲಹೊತ್ತು ವಾಹನಗಳ ಸಂಚಾರಕ್ಕೆ ತೊಡಕುಂಟಾಗಿತ್ತು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮರವನ್ನು ತೆರವುಗೊಳಿಸಿದ್ದಾರೆ. ನಗರದ ಕೇಂದ್ರ ರೈಲು ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿದ್ದ ಮರವೊಂದರ ಕೊಂಬೆ ಮುರಿದುಬಿದ್ದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅದನ್ನು ತೆರವುಗೊಳಿಸಿದ್ದಾರೆ.
ಉಳಿದಂತೆ ಕೋಟೆಕಾರು ಬೀರಿ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಮರಗಳು ಧರೆಗುರುಳಿವೆ. ಪುತ್ತೂರು ತಾಲೂಕಿನ ಪೆರ್ನಾಜೆಯಲ್ಲಿ ಗಾಳಿಗೆ ಅಡಿಕೆ ತೋಟ ನೆಲಕಚ್ಚಿದೆ. ಕೆಲ ಮನೆಗಳ ಮೇಲ್ಚಾವಣೆ ಹಾರಿ ಹೋಗಿವೆ. ಮಂಗಳೂರಿನ ಭವಂತಿ ರಸ್ತೆಯ ಹಳೆ ಕಟ್ಟಡ ಒಂದರ ಮುಂಭಾಗ ಕುಸಿದ ಪರಿಣಾಮ ಕಟ್ಟಡದ ಕೆಳಗೆ ನಿಲ್ಲಿಸಿದ್ದ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಕೇಂದ್ರ ಹವಾಮಾನ ಇಲಾಖೆ ಶುಕ್ರವಾರ ರಾಜ್ಯ ಸರಕಾರಕ್ಕೆ ಪತ್ರ ಬರೆದು ಕರಾವಳಿಯಲ್ಲಿ ಜೂನ್ 12 ರವರೆಗೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದ್ದು, ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದೆ.
Comments are closed.