ಕರ್ನಾಟಕ

ದೇವೇಗೌಡ ಮತ್ತು ರೇವಣ್ಣರ ಮೇಲೆ ಕುಮಾರಸ್ವಾಮಿ ಅಸಮಾಧಾನ

Pinterest LinkedIn Tumblr


ಬೆಂಗಳೂರು: ಎಚ್.ಡಿ ದೇವೇಗೌಡ ಹಾಗೂ ಸಹೋದರ ರೇವಣ್ಣ ನಡೆಗೆ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಆಡಳಿತದಲ್ಲಿ ಇಬ್ಬರೂ ಕೂಡ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ನಿವಾಸಕ್ಕೆ ಪದೇಪದೇ ಅಧಿಕಾರಿಗಳು ಭೇಟಿ ನೀಡುತ್ತಿದ್ದು, ಅಧಿಕಾರಿಗಳನ್ನು ಮನೆಗೆ ಕರೆಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಆಡಳಿತಾತ್ಮಕ ವಿಚಾರದಲ್ಲಿ ದೇವೇಗೌಡರು ಹಾಗೂ ಸಹೋದರ ರೇವಣ್ಣ ಹಸ್ತಕ್ಷೇಪ ಮಾಡುತ್ತಿದ್ದು, ತಮಗೆ ಸಂಬಂಧ ವಿಲ್ಲದ ಸಭೆಗಳಲ್ಲಿ ರೇವಣ್ಣ ಪ್ರತ್ಯಕ್ಷವಾಗುತ್ತಿದ್ದಾರೆ ಎಂದು ಅಸಮಾಧಾನಗೊಂಡಿದ್ದಾರೆ.

ಈ ವಿಚಾರವು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಲೆನೋವಾಗಿ ಪರಿಣಮಿಸಿದ್ದು, ತಮಗೆ ಮುಕ್ತವಾಗಿ ಆಡಳಿತ ನಡೆಸಲು ಬಿಡಿ ಎಂದು ಎಚ್ ಡಿಕೆ ಹೇಳಿದ್ದಾರೆ. ಈ ಸಂಬಂಧ ದೇವೇಗೌಡ ಹಾಗೂ ರೇವಣ್ಣಗೆ ನೇರವಾಗಿಯೇ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

Comments are closed.