ಕರ್ನಾಟಕ

ದೇಶಾದ್ಯಂತ 4ನೇ ಅಂತರಾಷ್ಟ್ರೀಯ ಯೋಗ ದಿನ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರಿಂದ ಯೋಗ

Pinterest LinkedIn Tumblr

ನವದೆಹಲಿ: ದೇಶಾದ್ಯಂತ ಗುರುವಾರ 4ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿರುವ ಅರಣ್ಯ ಸಂಶೋಧನೆ ಸಂಸ್ಥೆಯಲ್ಲಿ ಸುಮಾರು 50,000 ಕಾರ್ಯಕರ್ತರೊಂದಿಗೆ ಯೋಗ ಮಾಡುತ್ತಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆಯಿಂದಲೇ ವಿವಿಧ ಆಸನಗಳನ್ನು ಮಾಡುತ್ತಿದ್ದಾರೆ. 87ರ ಈ ಇಳಿ ವಯಸ್ಸಿನಲ್ಲಿ ಕೂಡ ಅವರು ಯೋಗ ಗುರುಗಳ ಮಾರ್ಗದರ್ಶನದಲ್ಲಿ ವಿವಿಧ ದೈಹಿಕ ಕಸರತ್ತುಗಳಲ್ಲಿ ಭಾಗವಹಿಸಿ ಅನೇಕ ಮಂದಿಗೆ ಮಾದರಿ ಮತ್ತು ಸ್ಪೂರ್ತಿಯಾಗಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಗ ದಿನ ಕಾರ್ಯಕ್ರಮ ನಡೆಸುತ್ತಿದ್ದು ವಿವಿಧ ಯೋಗ ಗುರುಗಳು, ಸರ್ಕಾರದ ಸಚಿವರು ಕೂಡ ಯೋಗ ದಿನ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಯೋಗಾಭ್ಯಾಸದಲ್ಲಿ ನಿರತರಾಗಿದ್ದಾರೆ.

ರಾಷ್ಟ್ರಪತಿ, ಉಪ ರಾಷ್ಟ್ರಪತಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು, ಸೇನಾ ಯೋಧರು ದೇಶದ ಮೂಲೆ ಮೂಲೆಗಳಲ್ಲಿ ವಿವಿಧ ಯೋಗಾಭ್ಯಾಸಗಳಲ್ಲಿ ಇಂದು ಬೆಳಗ್ಗೆಯಿಂದಲೇ ನಿರತರಾಗಿದ್ದಾರೆ.

Comments are closed.