ರಾಷ್ಟ್ರೀಯ

ಕಾಶ್ಮೀರ: ಕಲ್ಲು ತೂರಾಟಗಾರರ ಮೇಲೆ ಫೈರಿಂಗ್‌: ಬಾಲಕಿ ಸೇರಿ ಮೂವರು ಸಾವು

Pinterest LinkedIn Tumblr


ಶ್ರೀನಗರ: ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಗೆ 16 ವರ್ಷದ ಬಾಲಕಿ ಸೇರಿ ಮೂವರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪ್ರದೇಶದಲ್ಲಿ ಸೇನಾ ಗಸ್ತಿನ ಮೇಲೆ ಪ್ರತಿಭಟನಾಕಾರರು ದಾಳಿಗೆ ಮುಂದಾದಾಗ ಭದ್ರತಾ ಪಡೆಗಳು ಗುಂಡು ಹಾರಿಸಿವೆ ಎಂದು ವರದಿಗಳು ತಿಳಿಸಿವೆ.

ಈ ವೇಳೆ ಕುಲ್ಗಾಮ್‌ನ ಹಾವೂರಾದ ನಿವಾಸಿಗಳಾದ ಶಕೀರ್‌ ಅಹ್ಮದ್‌(22), ಇರ್ಶಾದ್‌ ಮಜೀದ್‌(20) ಮತ್ತು 16 ವರ್ಷದ ಬಾಲಕಿ ಆ್ಯಂಡ್ಲೀಬ್‌ ಎಂಬಾಕೆ ಗುಂಡಿಗೆ ಬಲಿಯಾಗಿದ್ದಾರೆ.

ಘರ್ಷಣೆಯಲ್ಲಿ ಸುಮಾರು 10 ಮಂದಿ ಪ್ರತಿಭಟನಾಕಾರರು ಗಾಯಗೊಂಡಿದ್ದು, ಇದರಲ್ಲಿ ಇಬ್ಬರಿಗೆ ಗುಂಡಿನ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುವಾಗ ಓರ್ವ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಘಟನೆ ನಂತರ ವಾಟ್ಸ್‌ಆ್ಯಪ್‌ ಮೂಲಕ ವದಂತಿಗಳನ್ನು ಹಬ್ಬುವ ಸಾಧ್ಯತೆ ಇರುವುದರಿಂದ ಕುಲ್ಗಾಮ್‌ ಮತ್ತು ಅನಂತ್‌ನಾಗ್‌ ಜಿಲ್ಲೆಗಳಲ್ಲಿ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

Comments are closed.