ಕರಾವಳಿ

ಭಾರೀ ಮಳೆ ಹಿನ್ನೆಲೆ : ದ.ಕ.ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Pinterest LinkedIn Tumblr

ಮಂಗಳೂರು, ಜುಲೈ.8: ದ.ಕ.ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ತೀವ್ರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಜುಲೈ 9ರಂದು ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಜು.11ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Comments are closed.