ಮೈಸೂರು: ಎಲ್ಐಸಿ ಬಾಂಡ್ ಎಂದು ಪತ್ನಿಯಿಂದ ವಿಚ್ಛೇದನ ಪತ್ರಕ್ಕೆ ಸಹಿ ಹಾಕಿಸಿಕೊಂಡ ಪೊಲೀಸ್ ಹೆಡ್ ಕಾನ್ಸ್ಟೆಬಲ್, ಎರಡನೇ ಮದುವೆಯಾಗಿರುವ ಘಟನೆ ನಡೆದಿದೆ.
ಮೈಸೂರಿನ ಯೋಗ ನರಸಿಂಹಸ್ವಾಮಿ ದೇಗುಲದಲ್ಲಿ ಘಟನೆ ನಡೆದಿದ್ದು, ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆಗಿದ್ದ ಪತಿಯನ್ನು ಮದುವೆ ಮಂಟಪದಿಂದಲೇ ಪತ್ನಿ ಸವಿತಾ ಎಳೆದು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಣಸೂರು ತಾಲೂಕಿನ ಹೊಸಹಳ್ಳಿ ನಿವಾಸಿ ರಾಜಾಚಾರಿಗೆ ಮದುವೆಯಾಗಿ 18 ವರ್ಷವಾಗಿದ್ದು, ಎರಡು ಮಕ್ಕಳಿವೆ. ಆದರೆ, ಈತ ಫೇಸ್ಬುಕ್ನಲ್ಲಿ ಪರಿಚಯವಾದ ಮಹಿಳೆಗಾಗಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಪತಿಯ ನಡೆಗೆ ಆಕ್ರೋಶಗೊಂಡ ಮಹಿಳೆ ಎಸ್ಪಿ ಕಚೇರಿ ಆವರಣದಲ್ಲಿ ಗಂಡನನ್ನು ಎಳೆದಾಡಿ ರಂಪಾಟ ಮಾಡಿದ್ದಾರೆ. ಸದ್ಯ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ರಾಜಿ ಪಂಚಾಯಿತಿ ನಡೆಯುತ್ತಿದೆ.
ಮೈಸೂರು ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ರಾಜಾಚಾರಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Comments are closed.