ಕರಾವಳಿ

ಮಂಗಳೂರು ವಿವಿಯಲ್ಲಿ ಭ್ರಷ್ಟಾಚಾರ ಆರೋಪ : ಹಗರಣದ ತನಿಖೆಗೆ ಶಾಸಕ ವೇದವ್ಯಾಸ್ ಕಾಮಾತ್ ಆಗ್ರಹ

Pinterest LinkedIn Tumblr

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರದ ಹಗರಣದ ಬಗ್ಗೆ ತನಿಖೆ ನಡೆಸಲು ಕೋರಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡರಿಗೆ ಲಿಖಿತವಾಗಿ ಮನವಿ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಸಚಿವ ಜಿಟಿ ದೇವೇಗೌಡರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ವೇದವ್ಯಾಸ ಕಾಮತ್ ಅವರು ಮಂಗಳೂರು ವಿಶ್ವವಿದ್ಯಾನಿಲಯ (ಮಾನಸ ಗಂಗೋತ್ರಿ) ಯಲ್ಲಿ 2014 ರಿಂದ ಇಲ್ಲಿಯವರೆಗೆ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ಮಾಹಿತಿ ನೀಡಿದರು.

ಅಲ್ಲಿನ ಆಡಳಿತ ಮಂಡಳಿಯು ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ಖರೀದಿ, ಸಿಸಿಟಿವಿ ಅಳವಡಿಕೆ, ಸೋಲಾರ್ ವಿದ್ಯುತ್ ದೀಪಗಳ ಅಳವಡಿಕೆ, ಅಂತರಾಷ್ಟ್ರೀಯ ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಾಣ ಹಾಗೂ ನಿಯಮ ಬಾಹಿರವಾಗಿ ಅನಧಿಕೃತ ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿರುವ ಬಗ್ಗೆ ಮತ್ತು ಇನ್ನೂ ಮುಂತಾದವುಗಳಲ್ಲಿ ನಡೆದಿರುವ ನೂರಾರು ಕೋಟಿ ಹಗರಣಗಳ ಬಗ್ಗೆ ಸ್ಥಳೀಯ ದಿನಪತ್ರಿಕೆ, ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ ಎಂದು ವಿವರ ನೀಡಿದರು.

ಈ ಎಲ್ಲಾ ಅಕ್ರಮ ಹಗರಣಗಳ ಕುರಿತು ತುರ್ತಾಗಿ ಉನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಿದ್ದಾರೆ.

Comments are closed.