ಕರಾವಳಿ

ಗುಜ್ಜರಕೆರೆ ಅಭಿವೃದ್ಧಿ ನನ್ನ ಅವಧಿಯಲ್ಲೇ ಪೂರ್ಣಗೊಳ್ಳಲಿದೆ :ಶಾಸಕ ವೇದವ್ಯಾಸ ಕಾಮತ್

Pinterest LinkedIn Tumblr

ಮಂಗಳೂರು : ಗುಜ್ಜರಕೆರೆ ಅಭಿವೃದ್ಧಿಗೆ ಶೀಘ್ರದಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಅವರು ಗುಜ್ಜರಕೆರೆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ಕೆಲವೊಂದು ಡ್ರೈನೇಜ್ ಒಳಹರಿವಿನಿಂದಾಗಿ ಸಮಸ್ಯೆ ಉದ್ಭವಿಸಿದೆ. ಡ್ರೈನೇಜ್ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದರೆ ಸಮಸ್ಯೆ ಪರಿಹಾರ ಕಾಣಲಿದ್ದು, ಗುಜ್ಜರಕೆರೆಯ ಅಭಿವೃದ್ಧಿಯು ನನ್ನ ಶಾಸಕತ್ವದ ಅವಧಿಯಲ್ಲೇ ಪೂರ್ಣಗೊಳ್ಳಲಿದೆ ಎಂದು ಶಾಸಕರು ತಿಳಿಸಿದರು.

ಪಾಲಿಕೆಯ ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಬಿಜೆಪಿ ಪ್ರಮುಖರಾದ ರಾಜೇಂದ್ರ ಶೆಟ್ಟಿ, ಭಾಸ್ಕರಚಂದ್ರ ಶೆಟ್ಟಿ, ಗುತ್ತಿಗೆದಾರ ಪುರುಷೋತ್ತಮ ಶೆಟ್ಟಿ, ಮಮುನಾ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Comments are closed.