ರಾಷ್ಟ್ರೀಯ

ಏರ್ ಸೆಲ್‌ ಮ್ಯಾಕ್ಸಿಸ್‌ ಹಗರಣ: ಚಿದಂಬರಂ, ಪುತ್ರ ಕಾರ್ತಿ ವಿರುದ್ಧ ಸಿಬಿಐ ಆರೋಪಪಟ್ಟಿ

Pinterest LinkedIn Tumblr


ಹೊಸದಿಲ್ಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಮತ್ತು ಪುತ್ರ ಕಾರ್ತಿ ಹೆಸರನ್ನು ಸಿಬಿಐ ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ.

ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಮುಂದೆ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ.

2006ರಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಅಧಿಕಾರ ದುರುಪಯೋಗಪಡಿಸಿಕೊಂಡು ವಿದೇಶಿ ಹೂಡಿಕೆ ಪ್ರೋತ್ಸಾಹ ಮಂಡಳಿ ಅನುಮೋದನೆ ಮೂಲಕ ಆರ್ಥಿಕ ವಹಿವಾಟು ನಡೆಸಲು ಅನುಮತಿ ನೀಡಿದ್ದರು ಎಂದು ಸಿಬಿಐ ತಿಳಿಸಿದೆ.

ಏರ್‌ಸೆಲ್‌ ಮ್ಯಾಕ್ಸಿಸ್‌ ಹಗರಣ 3500 ಕೋಟಿ ರೂ ಹಾಗೂ ಐಎಎಕ್ಸ್‌ ಮೀಡಿಯಾ ಹಗರಣ 350 ಕೋಟಿ ರೂ. ಮೊತ್ತದ್ದಾಗಿದೆ.

ಸಿಬಿಐ ಆರೋಪಪಟ್ಟಿಯಲ್ಲಿ ನನ್ನ ಹೆಸರು ಸೇರಿಸಲು ಒತ್ತಡ ಬಂದಿದೆ. ನಾನು ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತೇನೆ ಎಂದು ಪಿ. ಚಿದಂಬರಂ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಆರ್ಥಿಕ ವ್ಯವಹಾರ ಕುರಿತ ಸಚಿವ ಸಂಪುಟಕ್ಕೆ ಕಡತವನ್ನು ಕಳುಹಿಸದೇ ಚಿದಂಬರಂ ತಾವೇ ಕೆಲವು ವಹಿವಾಟು ನಡೆಸಲು ಅನುಮೋದನೆ ನೀಡಿದ್ದರು ಎಂದು ಸಿಬಿಐ ಆರೋಪಿಸಿದೆ.

Comments are closed.