ಕರ್ನಾಟಕ

ಮಾಧ್ಯಮದವರನ್ನು ಹೊರಗಿಟ್ಟು ಸಭೆ ನಡೆಸಿದ ಕುಮಾರಸ್ವಾಮಿ

Pinterest LinkedIn Tumblr


ಮಡಿಕೇರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಸಭೆಗೆ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಗಿತ್ತು.

ಹಾರಂಗಿ ಡ್ಯಾಂಗೆ ಬಾಗಿನ ಅರ್ಪಿಸಿ, ಬಳಿಕ ಕುಮಾರಸ್ವಾಮಿ ಸಭೆ ನಡೆಸಿ, ಕೊಡಗು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸಿಎಂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸಾಥ್ ನೀಡಿದರು.

ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಕೊಡಗಿನ ಮಳೆಹಾನಿ ಪರಿಸ್ಥಿತಿ ತಿಳಿದು ಸ್ಪಂದಿಸಲು ಬಂದಿದ್ದೇನೆ. 35 ವರ್ಷಗಳ ಬಳಿಕ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಯ ಜಲಾಶಯ, ಜಲಪಾತಗಳು ಉಕ್ಕಿ ಹರಿಯುತ್ತಿವೆ. ಆದರೆ ಮಳೆಯಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿರೋದು ಗಮನಕ್ಕೆ ಬಂದಿದ್ದು, ನಾಡಿನ ಜನರಿಗೆ ನೀರುಣಿಸುವ ಕೊಡಗಿನ ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿದೆ. ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಪಕ್ಕದ ಮೈಸೂರು, ಹಾಸನ ಜಿಲ್ಲೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಯ ಮಳೆ ಹಾನಿ ಹಾಗೂ ಪ್ರವಾಹ ಸ್ಥಿತಿ ಬಗ್ಗೆ ಮಾಹಿತಿ ಪಡೆದು, ಚರ್ಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಭೆ ನಡೆಯಿತು.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಅನಿತಾ ಕುಮಾರಸ್ವಾಮಿ, ಸಚಿವರಾದ ಡಿ ಕೆ ಶಿವಕುಮಾರ್, ಹೆಚ್ ಡಿ ರೇವಣ್ಣ ಮತ್ತು ಸಾ ರಾ ಮಹೇಶ ಉಪಸ್ಥಿತರಿದ್ದರು.

Comments are closed.