ಮಂಗಳೂರು ಜುಲೈ 26 : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಹಾಗೂ ಆಯ್ದ ಕೆಲವು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎಂ, ಬಿ.ಎಸ್ಸಿ, ಬಿ.ಸಿ.ಎ, ಎಂ.ಕಾಂ, ಎಂ.ಎಸ್.ಡಬ್ಲ್ಯು, ಎಂ.ಸಿ.ಎ, ಎಂ.ಬಿ.ಎ, ಮಾಹಿತಿ ತಂತ್ರಜ್ಞಾನದ ಪದವಿ ವ್ಯಾಸಂಗ ಪೂರ್ತಿಗೊಳಿಸಿದ ಹಾಗೂ ವಿದೇಶದಿಂದ ಮರಳಿ ಉದ್ಯೋಗವನ್ನು ಅರಸುತ್ತಿರುವ ನಾಗರೀಕರಿಗಾಗಿ ಹಾಗೂ ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಯ್ದ ಖಾಸಗಿ ಕಾಲೇಜುಗಳು ಹಾಗೂ ಡಾ. ಪಿ. ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಮಂಗಳೂರಿನ ವಿದ್ಯಾರ್ಥಿಗಳಿಗಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಜುಲೈ 30ರಂದು ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಲೇಬರ್ ನೆಟ್ ಸಂಸ್ಥೆ, ಸೆಂಚುರಿ ಬಿಲ್ಡರ್ಸ್, ಮಂಗಳೂರು ವಿ.ವಿ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಪ್ರಭಾತ್ ಕೌಶಲ್ಯ ಅಭಿವೃದ್ಧಿ ಕೇಂದ್ರ, ದ.ಕ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಮಂಗಳಗಂಗೋತ್ರಿ ವಾಣಿಜ್ಯಶಾಸ್ತ್ರ ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಹಾಗೂ ಕಾಲೇಜಿನ ಶಿಕ್ಷಕ ರಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಾಯದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಮಂಗಳೂರಿನ ರಥಬೀದಿಯಲ್ಲಿನ ಡಾ. ಪಿ. ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಜುಲೈ 30 ರಂದು ಬೆಳಿಗ್ಗೆ 10 ರಿಂದ 4 ಗಂಟೆವರೆಗೆ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ 40 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳುತ್ತಿದ್ದು, ಇದರ ಉಪಯೋಗವನ್ನು ಉದ್ಯೋಗಾಕಾಂಕ್ಷಿಗಳು ಪಡೆದುಕೊಳ್ಳುವಂತೆ ಮೇಳದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.