ರಾಷ್ಟ್ರೀಯ

ಅತ್ಯಾಚಾರ ಘಟನೆಗಳು ಹೆಚ್ಚುತ್ತಿರುವುದಕ್ಕೆ ಸುಪ್ರೀಂ ನ್ಯಾಯಮೂರ್ತಿ ನೀಡಿದ ಕಾರಣವೇನು?

Pinterest LinkedIn Tumblr


ಅಗರ್ತಲಾ(ತ್ರಿಪುರಾ): ಸಮಾಜದಲ್ಲಿ ಕುಸಿಯುತ್ತಿರುವ ನೈತಿಕತೆ, ಹೆಚ್ಚಾಗುತ್ತಿರುವ ಅಶ್ಲೀಲತೆ ಹಾಗೂ ಇತರೆ ಕಾರಣಗಳಿಂದ ಮಕ್ಕಳ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ದೀಪಕ್​ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ತ್ರಿಪುರಾದಲ್ಲಿ ನಡೆದ ವಿಚಾರ ಸಂಕಿರಣ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದಲ್ಲಿ ನೈತಿಕತೆ ಕುಸಿದಿದ್ದು, ಕುಟುಂಬ ವಾತಾವರಣ ನೆಲಕಚ್ಚಿದೆ. ಅಶ್ಲೀಲತೆ ಮತ್ತು ಇನ್ನಿತರ ಕಾರಣಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಇಂತಹ ಪ್ರಕರಣಗಳು ಹೆಚ್ಚು ದಾಖಲಾಗಿವೆ ಎಂದು ಗುಪ್ತಾ ತಿಳಿಸಿದರು.

ವಿಚಾರ ಸಂಕಿರಣದಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್​ ದೇಬ್​ ಕೂಡ ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ವಿವಿಧ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕಾದ ಅಗತ್ಯವಿದ್ದು, ಮಕ್ಕಳು ಅವುಗಳಿಂದ ಲಾಭ ಪಡೆಯಬಹುದಾಗಿದೆ ಎಂದು ಹೇಳಿದರು.

Comments are closed.