ಬೆಳಗಾವಿ: ನಗರದ ಬೆಂಡಿ ಬಜಾರ್‌ನ ತೆಂಗಿನಕರಗಲ್ಲಿ ಪ್ರದೇಶದಲ್ಲಿ ಗಣೇಶ ವಿಗ್ರಹದ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಕಲ್ಲು ತಗುಲಿ ಗಣಪತಿ ವಿಗ್ರಹದ ಕಿವಿ ಮತ್ತು ಕಾಲಿಗೆ ಕಲ್ಲುಗಳು ತಗುಲಿವೆ. ಎರಡು ವಾಹನಗಳು ಜಖಂಗೊಂಡಿವೆ.
ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣ ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ.
ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
Comments are closed.