ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಎಂಬವರನ್ನು ಅಪಹರಿಸಿ, ಗಂಭೀರ ಹಲ್ಲೆ ನಡೆಸಿದ ಆರೋಪದಲ್ಲಿ ಪೊಲೀಸರ ವಶದಲ್ಲಿದ್ದ ನಟ ದುನಿಯಾ ವಿಜಯ್ ಮತ್ತು ಪಟಾಲಂನ್ನು ಭಾನುವಾರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ನೀಡಿದ್ದು ಆರೋಪಿಗಳಿಗೆ ಜೈಲುವಾಸ ಕಟ್ಟಿಟ್ಟ ಬುತ್ತಿಯಾಗಿದೆ.
ಕ್ಷುಲ್ಲಕ ಕಾರಣಕ್ಕೆ ಮಾರುತಿಗೌಡ ಎನ್ನುವರನ್ನು ದುನಿಯಾ ವಿಜಯ್ ಅಪಹರಿಸಿದ್ದರು. 30 ನಿಮಿಷದ ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಪ್ರತ್ಯಕ್ಷರಾಗಿದ್ದಲ್ಲದೇ ಹಲ್ಲೆ ಮಾಡಿದ್ದ ಜಿಮ್ ಟ್ರೇನರ್ ಮಾರುತಿಗೌಡನ್ನ ಕರೆದುಕೊಂಡು ಬಂದಿದ್ದರು. ಆದರೆ ದುನಿಯಾ ವಿಜಯ್ ಪೊಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದು, ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ.ಅಪಹರಣ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ರಾತ್ರಿ ಅರೆಸ್ಟ್ ಆಗಿದ್ದ ದುನಿಯಾ ವಿಜಿಯನ್ನ ದಿನವಿಡಿ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ದುನಿಯಾ ವಿಜಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು. ಇದೀಗ ಪೊಲೀಸರು ದುನಿಯಾ ವಿಜಿಯನ್ನು ಪರಪ್ಪನ ಅಗ್ರಹಾರ ಜೈಲಿನತ್ತ ಕರೆದೊಯ್ಯುತ್ತಿದ್ದಾರೆ.
Comments are closed.