ಮನೋರಂಜನೆ

ಮೈಸೂರಿನ ಹಿನಕಲ್ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ

Pinterest LinkedIn Tumblr


ಮೈಸೂರು : ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ನಟ ದರ್ಶನ್ ಕಾರು ಅಪಘಾತವಾಗಿದ್ದು ಈ ವೇಳೆ ದರ್ಶನ್ ಅವರು ಗಾಯಗೊಂಡಿದ್ದಾರೆ. ಇನ್ನು ಕಾರಿನಲ್ಲಿದ್ದ ನಟ ದೆವರಾಜ್ ಹಾಗೂ ಅವರ ಪುತ್ರ ಪ್ರಜ್ವಲ್ ದೇವರಾಜ್ ಅವರೂ ಕೂಡ ಗಾಯಗೊಂಡಿದ್ದಾರೆ. ತಡರಾತ್ರಿ ಖಾಸಗಿ ಹೋಟೆಲ್ ನಲ್ಲಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮೂವರನ್ನು ಕೂಡ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ದರ್ಶನ್ ಅವರ ಕೈ ಮುರಿದಿದ್ದು, ಅವರಿಗೆ ಕೈ ಶಸ್ತ್ರ ಚಿಕಿತ್ಸೆ ನೆರವೆರಿಸಲಾಗಿದೆ.

ಸ್ವತಃ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದ ವೇಳೆ ಕಾರು ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಸೇರಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸಂಭವಿಸಿದ ಅಪಘಾತದಲ್ಲಿ ದರ್ಶನ್ ಹಾಗೂ ಪ್ರಜ್ವಲ್ ಗೆ ಹೆಚ್ಚಿನ ಗಾಯಗಳಾಗಿದ್ದು, ನಟ ದೇವರಾಜ್ ಕೈ ಬೆರಳಿಗೆ ಗಂಭೀರ ಗಾಯವಾಗಿದ್ದು, ಅವರಿಗೂ ಕೂಡ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ.

Comments are closed.