ಬೆಂಗಳೂರು: ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕರಿಸಿದೆ.
ಮ್ಕ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ನಟ ದುನಿಯಾ ವಿಜಯ್ ಪರ ವಾದ ಮಂಡಿಸಿದ್ದ ವಕೀಲರು ತಮ್ಮ ಕಕ್ಷಿದಾರರ ವಿರೌದ್ಧ ಪೊಲೀಸರು ಸೆಕ್ಷನ್ .326 ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಕ್ಕೆ ಆಕ್ಷೇಪಿಸಿದ್ದರು.
ನಡೆದಿರುವ ಘಟನೆಯಲ್ಲಿ ಮಾರಕಾಸ್ತ್ರಗಳು ಬಳಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದು ಜಾಮೀನು ನೀಡಬಹುದಾದ ಪ್ರಕರಣವಾಗಿದೆ ಎಂದು ವಿಜಯ್ ಪರ ವಾದ ಮಂಡಿಸಿರುವ ವಕೀಲರು ಹೇಳಿದ್ದರು. ಆದರೆ ವಿಜಯ್ ಗೆ ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಇದು ಗಂಭೀರ ಪ್ರಕರಣವಗಿದ್ದು ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ ಎಂದಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಆದೇಶವನ್ನು ಸೆ.26 ಕ್ಕೆ ಕಾಯ್ದಿರಿಸಿತ್ತು. ಈಗ ಪ್ರಕರಣದ 4 ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ.
Comments are closed.