ಕರಾವಳಿ

ಕನ್ನಡ ರಾಜ್ಯೋತ್ಸವ : ಪೂರ್ವಭಾವಿ ಸಭೆ – ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ನಿರ್ಧಾರ

Pinterest LinkedIn Tumblr

ಮಂಗಳೂರು ಅಕ್ಟೋಬರ್ 07 : 2018ರ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲರೂ ಸಮನ್ವಯದಿಂದ ಕಾರ್ಯೋನ್ಮುಖರಾಗಲು ಅಪರ ಜಿಲ್ಲಾಧಿಕಾರಿ ಕುಮಾರ್ ಹೇಳಿದರು.  ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಅಂದು ಪೂರ್ವಾಹ್ನ 8.45 ಗಂಟೆಗೆ ನೆಹರೂ ಮೈದಾನಿನಲ್ಲಿ ನಡೆಯಲಿದು ್ದ, ಜಿಲ್ಲಾ ಉಸ್ತುವಾರಿ ಸಚಿವರು ದ್ವಜಾರೋಹಣ ನೆರವೇರಿಸಿ ಸಂದೇಶ ನೀಡುವರು. ಈ ನಾಡಹಬ್ಬಕ್ಕೆ ಚ್ಯುತಿ ಬಾರದಂತೆ ವಿಜೃಂಬಣೆಯಿಂದ ಆಚರಿಸುವಂತೆ ಹಿಂದಿನ ವರ್ಷಗಳಲ್ಲಿ ಶಿಸ್ತುಬದ್ದವಾಗಿ ಆಚರಿಸಿಕೊಂಡು ಬಂದಂತೆ ಈ ಸಾಲಿನಲ್ಲಿಯೂ ಕೂಡಾ ತಾಯಿ ಭುವನೇಶ್ವರಿಯ ಭಾವಚಿತ್ರವನ್ನು ಮೆರವಣಿಗೆಯ ಮೂಲಕ ಜ್ಯೋತಿ ವೃತ್ತದಿಂದ ಪ್ರಾರಂಭಿಸಿ ನೆಹರೂ ಮೈದಾನಕ್ಕೆ ತಲುಪಿಸಲು ಎಲ್ಲ ಅಧಿಕಾರಿಗಳಿಗೆ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಸೂಚನೆ ನೀಡಿದರು.

ಕಲೆ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿರುವ ಕವಿಗಳ ಸಾಹಿತಿಗಳ ವೇಷವನ್ನು ಧರಿಸಿ ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸುವಂತೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಲಾಯಿತು.

ಮೆರವಣಿಗೆಯಲ್ಲಿ ಭಾಗವಹಿಸುವ ಟ್ಯಾಬ್ಲೋ ರಚಿಸಿ ಸುಸೂತ್ರವಾಗಿ ನಿರ್ವಹಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ನೋಡಲ್ ಅಧಿಕಾರಿಯಾಗಿ ನೇಮಿಸಲಾಯಿತು. ಮೆರವಣಿಗೆಯಲ್ಲಿ ಆರೋಗ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತೋಟಗಾರಿಕಾ ಇಲಾಖೆ, ತುಳು ಸಾಹಿತ್ಯ ಅಕಾಡೆಮಿ, ದ.ಕ.ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಧಾರ್ಮಿಕ ದತ್ತಿ ಇಲಾಖೆಯ ಜನಜಾಗೃತಿ ಮೂಡಿಸುವಂತಹ ಟ್ಯಾಬ್ಲೊ ಗಳನ್ನು ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ಮತ್ತಿತರರು ಉಪಸ್ಥಿತರಿದ್ದರು.

Comments are closed.