ಕರಾವಳಿ

ವಿಚಾರಣಾಧೀನ ಕೈದಿ ಪರಾರಿ ಪ್ರಕರಣ; ಇಬ್ಬರು ಪೊಲೀಸರು ಅಮಾನತು

Pinterest LinkedIn Tumblr

ಕುಂದಾಪುರ: ನ್ಯಾಯಾಲಯಕ್ಕೆ ಕರೆತದು ರೈಲಿನಲ್ಲಿ ಮರಳಿ ಕಾರಾವರ ಜೈಲಿಗೆ ಕರೆದೊಯ್ಯುತ್ತಿರುವಾಗ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋದ ವಿಚಾರಣಾಧೀನ ಕೈದಿ ಪರಾರಿ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದಡಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿ ಉಡುಪಿ ಎಸ್ಪಿ ಲಕ್ಷ್ಮಣ ನಿಂಬರ್ಗಿ ಆದೇಶಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆ ಸಿಬ್ಬಂದಿ ಉದಯ ಕುಮಾರ್ ಹಾಗೂ ಡಿ.ಎ.ಆರ್ ಸಿಬ್ಬಂದಿ ಗೋಪಾಲ್ ಅಮಾನತುಗೊಂಡವರು.

2 ತಿಂಗಳ ಹಿಂದೆ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದ ಸುರೇಶ್ ಮರಾಠಿ ಕಾರವಾರ ಜೈಲಿನಲ್ಲಿದ್ದ. ವಿಚಾರಣಾಧೀನ ಕೈದಿಯಾದ ಆತನನ್ನು ಉಡುಪಿಯ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಕರೆದೊಯ್ದು ಬಳಿಕ ವಾಪಾಸ್ ಕಾರಾವರಕ್ಕೆ ರೈಲಿನಲ್ಲಿ ಕರೆದೊಯ್ಯುತ್ತಿದ್ದಾಗ ಬೈಂದೂರು ರೈಲು ನಿಲ್ದಾಣದ ಬಳಿ ಆರೋಪಿ ತನಗೆ ವಾಂತಿ ಬರುತ್ತಿದೆಯೆಂಬ ನಾಟಕವಾಡಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ.

ಬೈಂದೂರು ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Comments are closed.