ಕರಾವಳಿ

ಕಳವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಸೆರೆ

Pinterest LinkedIn Tumblr

ಮಂಗಳೂರು, ಅಕ್ಟೋಬರ್.17: ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತೋಡಾರ್ ಹಿದಾಯತ್‌ವುಲ್ ನಗರ ನಿವಾಸಿ ಮುಹಮ್ಮದ್ ಫೈಝಲ್ ಯಾನೆ ತೋಡಾರ್ ಫೈಝಲ್ ಯಾನೆ ಕ್ಯಾಬರೆ ಫೈಝಲ್ (28) ಎಂದು ಗುರುತಿಸಲಾಗಿದೆ.

ಈತ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಸಹಿತ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸರಿಗೆ ದೊರಕಿದ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಮಂಗಳೂರು ದಕ್ಷಿಣ ರೌಡಿ ನಿಗ್ರಹದಳ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರು ಪ್ರಕರಣ, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಒಳಗೊಂಡಂತೆ ಒಟ್ಟು ಒಂಬತ್ತು ಕಳವು ಪ್ರಕರಣಗಳು ದಾಖಲಾಗಿವೆ.

ಪತ್ತೆ ಕಾರ್ಯಾಚರಣೆಯನ್ನು ಮಂಗಳೂರು ಪೊಲೀಸ್ ಆಯುಕ್ತರ ಆದೇಶದಂತೆ ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪ ಆಯುಕ್ತರ ನಿರ್ದೇಶನದಂತೆ ಮಂಗಳೂರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಿದ್ದಗೌಡ ಭಜಂತ್ರಿ, ಪೊಲೀಸ್ ಉಪನಿರೀಕ್ಷಕ ವೆಂಕಟೇಶ್, ದಕ್ಷಿಣ ಉಪವಿಭಾಗ ರೌಡಿ ನಿಗ್ರಹ ದಳದ ಸಿಬ್ಬಂದಿ ಭಾಗವಹಿಸಿದ್ದರು.

Comments are closed.