ರಾಷ್ಟ್ರೀಯ

ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಅಧಿಕ ಗೆಲುವು ಸಾಧಿಸಿದ ಬಿಜೆಪಿ

Pinterest LinkedIn Tumblr


ಶ್ರೀನಗರ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆಯ ನಾಲ್ಕೂ ಹಂತಗಳ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಗೆಲುವು ಸಾಧಿಸಿದೆ.

ಜಮ್ಮು ಕಾಶ್ಮೀರದ 43 ಮುನ್ಸಿಪಲ್ ಕಾರ್ಪೋರೇಷನ್ ಹಾಗೂ 48 ಪುರಸಭೆಗಳನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಂಡಿದೆ. 18 ಸ್ವತಂತ್ರ ಅಭ್ಯರ್ಥಿಗಳು ಮುನ್ಸಿಪಲ್ ಕಾರ್ಪೋರೇಷನ್​ಗಳಲ್ಲಿ ಗೆಲುವು ಸಾಧಿಸಿದ್ದಾರೆ . 14 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಆರ್.ಎಸ್.ಪುರ, ಅರ್ನಿಯಾ, ಘೋ ಮಾನ್ಸಾನ್, ಬಿಷ್ನಾ, ಜೌರಿಯನ್, ಅಖ್ನೂರ್ ಮತ್ತು ಖೋರ್ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದಾರೆ. ನಾಲ್ಕು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 2,900 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 240 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ನಡೆದ 4ನೇ ಹಂತದ ಚುನಾವಣೆಯಲ್ಲಿರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್​, ಬಿಜೆಪಿ ಮಾತ್ರ ಈ ಚುನಾವಣಾ ಕಣದಲ್ಲಿದ್ದವು. ಇದರ ಜತೆಗೆ ಪಕ್ಷೇತರರು ಕೂಡ ಸ್ಪರ್ಧೆಯಲ್ಲಿದ್ದರು. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 35 (ಎ) ವಿಧಿಯ ಬಗ್ಗೆ ಬಿಜೆಪಿಯ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು ಒತ್ತಾಯಿಸಿ ರಾಜ್ಯದ ಪ್ರಮುಖ ಪ್ರಾದೇಶಿಕ ಪಕ್ಷಗಳಾದ ನ್ಯಾಷನಲ್​ ಕಾನ್ಫರೆನ್ಸ್​ (ಎನ್​ಸಿ), ಪೀಪಲ್ಸ್​ ಡೆಮಾ ಕ್ರಟಿಕ್​ ಪಾರ್ಟಿ (ಪಿಡಿಪಿ) ಚುನಾವಣೆಯನ್ನು ಬಹಿಷ್ಕರಿಸಿತ್ತು.

Comments are closed.